ಉಡುಪಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆಗೊಳಿಸುವಂತೆ ಮತ್ತು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಗ್ಯ ಸಚಿವ ಯು. ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಉಡುಪಿ : ಉಡುಪಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆಗೊಳಿಸುವಂತೆ ಮತ್ತು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಗ್ಯ ಸಚಿವ ಯು. ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿಯನ್ನು 2021ರಲ್ಲಿ ಪ್ರಾರಂಭಿಸಲಾಗಿದ್ದು, ಮುಕ್ತಾಯದ ಹಂತದಲ್ಲಿದೆ. ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಎಲ್ಲಾ ಅಗತ್ಯ ಸೌಲಭ್ಯ, ಸಿಬ್ಬಂದಿಗಳನ್ನು ನಿಯೋಜಿಸಿ, 250 ಹಾಸಿಗೆ ಸಾಮಾರ್ಥ್ಯದ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಕೂಡಲೇ ಲೋಕಾರ್ಪಣೆ ಗೊಳಿಸುವಂತೆ ಶಾಸಕರು ಆಗ್ರಹಿಸಿದರು.ಬ್ರಹ್ಮಾವರ ತಾಲೂಕಾಗಿ 8 ವರ್ಷಗಳು ಕಳೆದಿದ್ದು, ತಾಲೂಕು ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಪ್ರಸ್ತುತ ಬ್ರಹ್ಮಾವರ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದ್ದು, ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವುದಕ್ಕಾಗಿ, ಈ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆಯೂ ಆಗ್ರಹಿಸಿದರು.ಅಲ್ಲದೇ ಉಡುಪಿ ನಗರದಲ್ಲಿರುವ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಹಾಗೂ ಪಿ.ಪಿ.ಪಿ. ಮಾದರಿಯಲ್ಲಿ ಬಿ. ಆರ್. ಶೆಟ್ಟಿ ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉದ್ದೇಶಿತ ನಿವೇಶನದಲ್ಲಿ ಪಾರ್ಕಿಂಗ್ ಮತ್ತು ಸರಕಾರಿ ನರ್ಸಿಂಗ್ - ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವಂತೆಯೂ ಮನವಿ ಮಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.