58.5 ಲಕ್ಷ ರು. ವೆಚ್ಚದ ಕಾಮಗಾರಿಗಳಿಗೆ ಯಶ್‌ಪಾಲ್ ಸುವರ್ಣ ಚಾಲನೆ

KannadaprabhaNewsNetwork |  
Published : Feb 07, 2026, 03:45 AM IST
ತೆಂಕನಿಡಿಯೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು.   | Kannada Prabha

ಸಾರಾಂಶ

ಉಡುಪಿ: ಇಲ್ಲಿನ ತೆಂಕನಿಡಿಯೂರು ಗ್ರಾಮದಲ್ಲಿ 58.50 ಲಕ್ಷ ರು. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಉಡುಪಿ: ಇಲ್ಲಿನ ತೆಂಕನಿಡಿಯೂರು ಗ್ರಾಮದಲ್ಲಿ 58.50 ಲಕ್ಷ ರು. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, ತೆಂಕನಿಡಿಯೂರು ಗ್ರಾಮದ ಜನತೆಯ ಬಹು ದಿನದ ಬೇಡಿಕೆಯಾಗಿದ್ದ ಬೈಲಕರೆ ನಾಗಬನ ರಸ್ತೆ ಅಭಿವೃದ್ಧಿಗೆ 20 ಲಕ್ಷ ರು., ಕೆಳಾರ್ಕಳಬೆಟ್ಟು ಭೋಜರಾಜ ಕಾಂಪೌಂಡ್ ಕೊಜಕುಳಿ ಒಳರಸ್ತೆ ಅಭಿವೃದ್ಧಿಗೆ 15 ಲಕ್ಷ ರು., ಅಂಬಿಕಾ ವೈಟ್ ರಸ್ತೆ ಹಾಗೂ ಲಕ್ಷ್ಮೀನಗರ 9ನೇ ಕ್ರಾಸ್ ರಸ್ತೆ ಅಭಿವೃದ್ಧಿಗೆ 15 ಲಕ್ಷ ರು. ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಪ್ರಗತಿ ಲೇಔಟ್ ನಲ್ಲಿ 8.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲೂ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.

\

ಸ್ಥಳೀಯ ಮುಖಂಡರಾದ ಶರತ್ ಬೈಲಕೆರೆ, ವಿಜಯ ಪ್ರಕಾಶ್, ವಿನೋದ್ ಸುವರ್ಣ, ಚರಣ್ ರಾಜ್, ಅರುಣ್ ಜತ್ತನ್, ಸತೀಶ್ ಬೈಲಕೆರೆ, ಕೃಷ್ಣ ಶೆಟ್ಟಿ, ಗಾಯತ್ರಿ, ಮಾಲಿನಿ ಜತ್ತನ್, ಶಾಲಿನಿ, ಪುಷ್ಪ, ಪ್ರಶಾಂತ್ ಹೆಬ್ಬಾರ್, ರೇಖಾ, ಗೀತಾ ಶೆಟ್ಟಿ, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ