ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದೇ ಮಳೆ ಬರುವ ಸಂದರ್ಭದಲ್ಲಿ ಮೇಲ್ಛಾವಣಿ ಮಳೆ ನೀರು ಸೋರಿ ಪ್ರಯಾಣಿಕರು ಕೊಡೆ ಹಿಡಿದು ಬಸ್ ನಿಲ್ದಾಣದಲ್ಲಿ ಕಾಯುವ ಸ್ಥಿತಿ ಬಗ್ಗೆ ಮಾಧ್ಯಮಗಳ ವರದಿಯ ಹಿನ್ನಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಸ್ ನಿಲ್ದಾಣದ ಮೇಲ್ಛಾವಣಿಯ ಶೀಟುಗಳು ಶಿಥಿಲಗೊಂಡು ಗಾಳಿ, ಮಳೆ, ಬಿಸಿಲಿಗೆ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು 2 ದಿನಗಳಲ್ಲಿ ತುರ್ತು ಕಾಮಗಾರಿ ನಡೆಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿಯ ಬಗ್ಗೆ ಪ್ರಯಾಣಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಗಿರಿಧರ ಆಚಾರ್ಯ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಮುಖರಾದ ಮಂಜು ಕೊಳ, ಲಕ್ಷ್ಮಣ್ ಮಲ್ಪೆ ಹಾಗೂ ನಗರ ಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.