ಮೆಸ್ಕಾಂ ಸಬ್ ಸ್ಟೇಷನ್ಸ್ ಮೇಲ್ದರ್ಜೆಗೇರಿಸಲು ಯಶ್‌ಪಾಲ್ ಮನವಿ

KannadaprabhaNewsNetwork |  
Published : Oct 09, 2026, 02:45 AM IST
08ಯಶ್‌ಪಾಲ್ | Kannada Prabha

ಸಾರಾಂಶ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಹಾಗೂ ಲೋ ವೋಲ್ಟೇಜ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವಂತೆ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಹಾಗೂ ಲೋ ವೋಲ್ಟೇಜ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವಂತೆ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ಜಿಲ್ಲಾ ಕೇಂದ್ರವಾದ ಉಡುಪಿ ವಿಧಾನಸಭಾ ಕ್ಷೇತ್ರವು ಶಿಕ್ಷಣ, ವೈದ್ಯಕೀಯ, ಮೀನುಗಾರಿಕೆ, ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಧಾರ್ಮಿಕವಾಗಿ ವೇಗವಾಗಿ ಅಭಿವೃದ್ಧಿ ಹೊಂದುತಿದ್ದು, ವಿದ್ಯುತ್ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕಡಿಮೆ ವೋಲ್ಟೇಜ್, ವಿದ್ಯುತ್ ವ್ಯತ್ಯಯ ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ಮೇಲಿನ ಒತ್ತಡದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಮೂಲಸೌಕರ್ಯಗಳನ್ನು ಸಮಗ್ರವಾಗಿ ಬಲಪಡಿಸಲು ಹೊಸ ಟ್ರಾನ್ಸ್‌ಫಾರ್ಮರ್‌ಗಳ ಅಳವಡಿಕೆ, ಹೊಸ ಸಬ್ ಸ್ಟೇಷನ್ ನಿರ್ಮಾಣ, ಈಗಿರುವ ಸಬ್ ಸ್ಟೇಷನ್ ಗಳ ಸಾಮರ್ಥ್ಯ ಹೆಚ್ಚಿಸುವುದು, ಹಳೆಯ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಹೊಸ ಕೇಬಲ್ ಮತ್ತು ವಿತರಣಾ ಮಾರ್ಗಗಳನ್ನು ನಿರ್ಮಿಸುವ ಅಗತ್ಯವಿದೆ. ಪ್ರಮುಖ ರಸ್ತೆ ಹಾಗೂ ಜಂಕ್ಷನ್‌ಗಳಲ್ಲಿ ರಸ್ತೆ ದೀಪ ಮತ್ತು ಹೈಮಾಸ್ಟ್ ದೀಪಗಳ ವ್ಯವಸ್ಥೆಯನ್ನು ಕೂಡ ಬಲಪಡಿಸಬೇಕಾಗಿದೆ.

ಕ್ಷೇತ್ರದ ಪ್ರಸ್ತುತ ಹಾಗೂ ಮುಂದಿನ ಹಲವು ವರ್ಷಗಳ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೆಸ್ಕಾಂಗೆ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಶಾಸಕರು ಇಂಧನ ಸಚಿವರಿಗೆ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಶಾ ಸೌಹಾರ್ದ ಸೊಸೈಟಿ ನಿವ್ವಳ ಲಾಭದಲ್ಲಿ ಶೇ.35ರಷ್ಟು ಏರಿಕೆ
10ರಂದು ಮಾ ‘ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ’