ಕನ್ನಡಪ್ರಭ ವಾರ್ತೆ ನಾಗಮಂಗಲ
ಹಿಂದಿನ ಅಧ್ಯಕ್ಷೆ ತುಪ್ಪದಮಡು ಚಿಕ್ಕಮ್ಮರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಯತೀಶ್ ಆರ್.ಈಡಿಗ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಯತೀಶ್ ಆರ್.ಈಡಿಗ ಅವಿರೋಧ ಆಯ್ಕೆಯಾಗಿದ್ದಾರೆಂದು ಸಹಕಾರ ಇಲಾಖೆ ಸಿಡಿಒ ಹಾಗೂ ಚುನಾವಣಾಧಿಕಾರಿ ಆನಂದ ನಾಯಕ್ ಪ್ರಕಟಿಸಿದರು.
ನೂತನ ಅಧ್ಯಕ್ಷ ಯತೀಶ್ ಆರ್.ಈಡಿಗ ಅವರಿಗೆ ಪ್ರಭಾರ ಅಧ್ಯಕ್ಷೆ ಆರ್.ಎ.ಗೀತಾ ಅಧಿಕಾರ ಹಸ್ತಾಂತರಿಸಿದರು. ಸಂಘದ ಕಾರ್ಯದರ್ಶಿ ಎಂ.ಕೆ.ಮೋಹನ್‌ರಾಜ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಯತೀಶ್ ಅವಿರೋಧ ಆಯ್ಕೆಯಾಗುತ್ತಿದ್ದಂತೆ ಸಂಘದ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.ನೂತನ ಅಧ್ಯಕ್ಷ ಯತೀಶ್ ಆರ್.ಈಡಿಗ ಮಾತನಾಡಿ, ತಾಲೂಕಿನ ಹಿರಿಯ ಸಹಕಾರಿ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ಈ ಸಂಸ್ಥೆ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚು ಮಾಡುವ ಜೊತೆಗೆ, ಆಡಳಿತ ಮಂಡಳಿ ಎಲ್ಲ ನಿರ್ದೇಶಕರ ಮತ್ತು ಹಿರಿಯ ಸಹಕಾರಿಗಳ ಸಲಹೆ, ಮಾರ್ಗದರ್ಶನ ಪಡೆದು ಅಭಿವೃದ್ಧಿಗೆ ಪೂರಕವಾಗಿ ಕ್ರಮವಹಿಸಲಾಗುವುದು. ಈ ಸಂಸ್ಥೆಯ ಜವಾಬ್ದಾರಿ ವಹಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಸೇರಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರಿಗೆ ಅಭಿನಂದಿಸುವುದಾಗಿ ತಿಳಿಸಿದರು.
---------
12ಕೆಎಂಎನ್ ಡಿ17ನಾಗಮಂಗಲ ಟಿಎಪಿಸಿಎಂಎಸ್‌ಗೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಯತೀಶ್ ಆರ್.ಈಡಿಗ ಅವರನ್ನು ಆಡಳಿತ ಮಂಡಳಿಯ ನಿರ್ದೇಶಕರು ಅಭಿನಂದಿಸಿದರು.