ಹುಚ್ಚರಂತೆ ವರ್ತಿಸುತ್ತಿರುವ ಯತ್ನಾಳ: ಹಿಂಡಸಗೇರಿ

KannadaprabhaNewsNetwork |  
Published : Dec 07, 2023, 01:15 AM IST
ಎ.ಎಂ. ಹಿಂಡಸಗೇರಿ. | Kannada Prabha

ಸಾರಾಂಶ

ಪಾಳೆ ಗ್ರಾಮದಲ್ಲಿ ನಡೆದ ಧರ್ಮಗುರುಗಳ ಮಹಾಸಮ್ಮೇಳನದಲ್ಲಿ ಐಸಿಸ್‌ ಉಗ್ರರ ಜತೆ ನಂಟು ಇದ್ದವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಈ ರೀತಿ ಹುಚ್ಚರಂತೆ ವರ್ತಿಸುವುದನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ, ಮುಸ್ಲಿಂ ಧರ್ಮಗುರುಗಳ ಸಮ್ಮೇಳನದ ಉಸ್ತುವಾರಿ ಎ.ಎಂ. ಹಿಂಡಸಗೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಪಾಳೆ ಗ್ರಾಮದಲ್ಲಿ ನಡೆದ ಧರ್ಮಗುರುಗಳ ಮಹಾಸಮ್ಮೇಳನದಲ್ಲಿ ಐಸಿಸ್‌ ಉಗ್ರರ ಜತೆ ನಂಟು ಇದ್ದವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಈ ರೀತಿ ಹುಚ್ಚರಂತೆ ವರ್ತಿಸುವುದನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ, ಮುಸ್ಲಿಂ ಧರ್ಮಗುರುಗಳ ಸಮ್ಮೇಳನದ ಉಸ್ತುವಾರಿ ಎ.ಎಂ. ಹಿಂಡಸಗೇರಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳರ ಮಾತು ಕೇಳಿ ನನಗೆ ಆಶ್ಚರ್ಯವಾಗಿದೆ. ಇದನ್ನು ನಾನು ಖಂಡಿಸುವೆ. ಈ ಹೇಳಿಕೆ ಸಣ್ಣ ವಿಷಯವಲ್ಲ. ಅಂದಿನ ಕಾರ್ಯಕ್ರಮದಲ್ಲಿ ಸರ್ಕಾರದ ಎಲ್ಲ ಜನಪ್ರತಿನಿಧಿಗಳು, ನೂರಾರು ಧರ್ಮಗುರುಗಳು ಭಾಗವಹಿಸಿದ್ದರು. ಈ ರೀತಿಯ ಹೇಳಿಕೆ ನೀಡುತ್ತಿರುವ ಯತ್ನಾಳರ ಮನಸ್ಸು ಸ್ಥಿರವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರ ಪಕ್ಷದ ವಿರುದ್ಧವೇ ಯತ್ನಾಳ ಮನಸ್ಸಿಗೆ ಬಂದ ಹಾಗೆ ಮಾತನಾಡುತ್ತಾರೆ. ಅವರಿಗೆ ಒಳ್ಳೆ ಬುದ್ಧಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ. ರಾಜಕೀಯವಾಗಿ ಮಾತನಾಡಲಿ, ಆದರೆ, ಈ ರೀತಿಯಾಗಿ ಧಾರ್ಮಿಕವಾಗಿ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಅಲ್ಲಿ ಅನೇಕ ಗುರುಗಳು ಬಂದು ಎಲ್ಲ ಧರ್ಮಗಳಲ್ಲಿ ಶಾಂತಿ ನೆಲೆಸಬೇಕು ಎನ್ನುವ ಉದ್ದೇಶದಿಂದ ಈ ಧರ್ಮ ಸಮ್ಮೇಳನ ಹಮ್ಮಿಕೊಂಡು ಸಾಮಾಜಿಕ, ಶೈಕ್ಷಣಿಕ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದೆ.

ನಮ್ಮಲ್ಲಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಅವರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿದೆ. ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕು. ಉದ್ದೇಶಪೂರ್ವಕವಾಗಿ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ. ಹಾಗೊಂದು ವೇಳೆ ಐಸಿಸ್ ನಂಟಿದ್ದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂಬುದನ್ನು ಯತ್ನಾಳ್ ಬಹಿರಂಗಪಡಿಸಲಿ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ