ಕನ್ನಡಪ್ರಭ ವಾರ್ತೆ ನಂಜನಗೂಡುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಜಾರಿ ಹೆಸರಿನಲ್ಲಿ ಎಸ್.ಇಪಿ ಮತ್ತು ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯವೆಸಗಿದ್ದಾರೆ ಎಂದು ಕೋಲಾರ ಕ್ಷೇತ್ರದ ಮಾಜಿ ಸಂಸದ ಎಸ್. ಮುನಿಸ್ವಾಮಿ ಆರೋಪಿಸಿದರು.ಪಟ್ಟಣದ ಯಾತ್ರಿಭವನದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷದಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ವಿಚಾರ ಯಾತ್ರೆ ಅಭಿಯಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಬದುಕಿದ್ದದಾಗ ಕಿರುಕುಳ ನೀಡಿದ ಕಾಂಗ್ರೆಸ್ ನವರು ಈಗ ಅಂಬೇಡ್ಕರ್ ಅವರ ಹೆಸರಿನಲ್ಲಿ ದಲಿತರ ಮತ ಪಡೆಯಲು ಹವಣಿಸುತ್ತಿದ್ದಾರೆ ದಲಿತ ಸಮುದಾಯದ ಡಾ.ಎಚ್.ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಮಂತ್ರಿಯಾಗಿದ್ದರೂ ದಲಿತರಿಗೆ ಮೀಸಲಾದ ಅನುದಾನ ದುರ್ಬಳಕೆಯಾಗಿರುವುದನ್ನು ತಡೆಯಲು ಸಾಧ್ಯವಾಗಿಲ್ಲ ಎಂದರು.ಕಾಂಗ್ರೆಸ್ ಉರಿಯುವ ಮನೆಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ರಾಜ್ಯದಲ್ಲಿ ಯಾವುದೇ ಪ್ರಗತಿಯಾಗಿಲ್ಲ, ಇನ್ನು ಎಸ್ಸಿ ಮತ್ತು ಎಸ್ಟಿಗಳನ್ನು ತಮ್ಮ ಓಟ್ ಬ್ಯಾಂಕ್ ಆಗಿ ಬಳಸಿಕೊಂಡು ವಂಚಿಸುತ್ತಿರುವ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕಿತ್ತೊಗೆಯಲು ಬಿಜೆಪಿ ಕಾರ್ಯಕರ್ತರು ಈಗಿನಿಂದಲೇ ಸಂಕಲ್ಪ ಹೊಂದಬೇಕು, ಮುಂಬರುವ ದಿನಗಳಲ್ಲಿ ಪ್ರತಿಯೊಂದು ಹಳ್ಳಿ ಹಾಗೂ ಬೂತ್ ವ್ಯಾಪ್ತಿಯಲ್ಲಿ ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಉರಿಯುವ ಮನೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದ ಮಾತನ್ನು ಜನರಿಗೆ ತಲುಪಿಸಬೇಕು ಎಂದು ಅವರು ತಿಳಿಸಿದರು.ಮಾಜಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ದೇಶದ ಸಂವಿಧಾನದ ಪೀಠಿಕೆ ಸೇರಿದಂತೆ ಅತಿ ಹೆಚ್ಚು ವಿಧಿಗಳನ್ನು ತಿದ್ದುಪಡಿ ಮಾಡಲಾಗಿದ್ದು, ಸಂವಿಧಾನದ ನಿಜವಾದ ವಿರೋಧಿಗಳು ಕಾಂಗ್ರೆಸ್ಸಿಗರೇ ಆಗಿದ್ದಾರೆ ಎಂದರು.ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಮಾತನಾಡಿದರು. ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಬಿಜೆಪಿ ಗ್ರಾಮಾಂತರ ಸಮಿತಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ನಗರಾದ್ಯಕ್ಷ ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಜಿಪಂ ಸಿ. ಚಿಕ್ಕರಂಗನಾಯಕ, ಮಂಗಳ ಸೋಮಶೇಖರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಅನಿಲ್, ಶೈಲೇಂದ್ರ, ಸೋಮಸುಂದರ್, ಪ್ರಫುಲ್ಲ ಮಲ್ಲಾಡಿ, ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎನ್. ಆರ್. ಕೃಷ್ಣಪ್ಪಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ನಗರಾಧ್ಯಕ್ಷ ಸಿದ್ಧರಾಜು, ನಗರಸಭಾ ಸದಸ್ಯ ಮಹದೇವಪ್ರಸಾದ್, ಮಹೇಶ್ ಅತ್ತಿಖಾನೆ ಇದ್ದರು.