ಯಡಿಯೂರಪ್ಪನವರ ಜನಸೇವೆ ನಮ್ಮೆಲ್ಲರಿಗೂ ದಾರಿದೀಪ

KannadaprabhaNewsNetwork |  
Published : May 10, 2026, 01:15 AM IST
೯ಶಿರಾ೨: ಶಿರಾದಿಂದ ಬಿಎಸ್ವೈ ಅಭಿಮಾನೋತ್ಸವಕ್ಕೆ ಶಿರಾ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯಿಂದ ಸುಮಾರು ೧೫೦ಕ್ಕೂ ಹೆಚ್ಚು ಬಸ್ಗಳಲ್ಲಿ ೮೦೦೦ಕ್ಕೂ ಅಧಿಕ ಕಾರ್ಯಕರ್ತರು ತೆರಳಿದರು. | Kannada Prabha

ಸಾರಾಂಶ

ಬಿಎಸ್‌ವೈ ಅಭಿಮಾನೋತ್ಸವಕ್ಕೆ ಶಿರಾ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯಿಂದ ಸುಮಾರು ೧೫೦ಕ್ಕೂ ಹೆಚ್ಚು ಬಸ್ಗಳಲ್ಲಿ ೮೦೦೦ಕ್ಕೂ ಅಧಿಕ ಕಾರ್ಯಕರ್ತರು ತೆರಳಿದರು.

ಕನ್ನಡಪ್ರಭ ವಾರ್ತೆ ಶಿರಾರೈತರ ಕಣ್ಮಣಿ ಯಡಿಯೂರಪ್ಪನವರ ೫೦ ವರ್ಷಗಳ ಸಾರ್ಥಕ ಜನಸೇವೆಯ ಪಯಣ ನಮಗೆಲ್ಲರಿಗೂ ದಾರಿದೀಪ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಶಿರಾ ಮತ್ತು ಮಧುಗಿರಿ ಸಂಘಟನಾತ್ಮಕ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಶಿಸ್ತಿನಿಂದ ಆಗಮಿಸುತ್ತಿರುವುದು ಸಂತಸದ ವಿಷಯ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.ಅವರು ನಗರದ ಸೇವಾ ಸದನದ ಬಳಿ ಚಿತ್ರದುರ್ಗದ ಬಿಎಸ್‌ವೈ ಅಭಿಮಾನೋತ್ಸವಕ್ಕೆ ಶಿರಾದಿಂದ ಹೊರಟಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಿಎಸ್‌ವೈ ಅಭಿಮಾನೋತ್ಸವಕ್ಕೆ ಶಿರಾ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯಿಂದ ಸುಮಾರು ೧೫೦ಕ್ಕೂ ಹೆಚ್ಚು ಬಸ್ಗಳಲ್ಲಿ ೮೦೦೦ಕ್ಕೂ ಅಧಿಕ ಕಾರ್ಯಕರ್ತರು ತೆರಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂಜಲಗೆರೆ ಮೂರ್ತಿ, ಉಪಾಧ್ಯಕ್ಷರಾದ ಚಿಕ್ಕಣ್ಣ ಮತ್ತು ಮದ್ದೆವಳ್ಳಿ ರಾಮಕೃಷ್ಣ, ಜಿಲ್ಲಾ ಕಾರ್ಯದರ್ಶಿ ಕುಮಾರ್ ಮಾಸ್ಟರ್ ಮತ್ತು ಪದ್ಮ ಮಂಜುನಾಥ್, ಓಬಿಸಿ ಜಿಲ್ಲಾಧ್ಯಕ್ಷರಾದ ಮಾಗೋಡು ಪ್ರತಾಪ್, ರಾಜ್ಯ ಕಾರ್ಯ ಕಾರಣಿ ಸಮಿತಿ ಸದಸ್ಯರಾದ ಬರಗೂರು ಶಿವಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಈರಣ್ಣ ಪಟೇಲ್, ಉಪಾಧ್ಯಕ್ಷರಾದ ನಾಗರಾಜ್ ಗೌಡ ಮತ್ತು ಬೊಪ್ಪರಾಯಪ್ಪ, ಪ್ರಧಾನ ಕಾರ್ಯದರ್ಶಿಯಾದ ಪುರುಷೋತ್ತಮ್, ಭಾಸ್ಕರ್, ರೈತ ಮೋರ್ಚಾ ಮೂಗನಹಳ್ಳಿ ರಾಮು, ಸೈಯಾದ್ ಬಾಬಾ, ನಗರ ಯುವ ಮೋರ್ಚಾ ಅಧ್ಯಕ್ಷರಾದ ಸ್ನೇಹಪ್ರಿಯ ಶಿವು, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ತಡಕಲೂರು ಹರೀಶ್, ಎಸ್ಟಿ ಮೋರ್ಚಾ ಅಧ್ಯಕ್ಷರಾದ ತೇಜಸ್ವರ್, ಪ್ರಧಾನ ಕಾರ್ಯದರ್ಶಿ ಭೂತರಾಜು, ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ನಾಗರತ್ನಮ್ಮ, ಹೇಮಲತ, ಅರುಣ, ಕವಿತ, ಶೋಭ, ತಿಮ್ಮರಾಜಮ್ಮ, ವಿಜಯಮ್ಮ, ಉಷಾ, ಮಂಜುಳ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಹಾಜರಿದ್ದರು. ೯ಶಿರಾ೨: ಶಿರಾದಿಂದ ಬಿಎಸ್ವೈ ಅಭಿಮಾನೋತ್ಸವಕ್ಕೆ ಶಿರಾ ಹಾಗೂ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯಿಂದ ಸುಮಾರು ೧೫೦ಕ್ಕೂ ಹೆಚ್ಚು ಬಸ್ಗಳಲ್ಲಿ ೮೦೦೦ಕ್ಕೂ ಅಧಿಕ ಕಾರ್ಯಕರ್ತರು ತೆರಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಪ್ರತಿಷ್ಠೆ ಬಿಟ್ಟು ಪಕ್ಷ ಸಂಘಟಿಸಿ: ನಿಖಿಲ್‌ ಕುಮಾರಸ್ವಾಮಿ
ನಂದಿನಿ ಉತ್ಪನ್ನಗಳು ಬಳಸಿದರೆ ರೈತರಿಗೆ ಅನುಕೂಲ