ಗದಗ: ಪ್ರತಿಯೊಬ್ಬರೂ ಯೋಗದಿಂದ ಆರೋಗ್ಯಯುತ ಜೀವನ ನಿರ್ವಹಣೆ ಮಾಡಲು ಸಹಕಾರಿಯಾಗುತ್ತದೆ. ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿಯಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಜಿಲ್ಲಾ ಆಯುಷ್ಯ ಇಲಾಖೆ ಅಧಿಕಾರಿ ಡಾ. ಜಯಪಾಲಸಿಂಗ ಪಿ.ಸಮೋರೆಕರ ಮಾತನಾಡಿ, ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಇದನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಈ ವೇಳೆ ಡಾ. ಸತೀಶ ಹೊಂಬಾಳಿ ಅವರು, ಯೋಗಾಸನ ಮತ್ತು ಪ್ರಾಣಾಯಾಮ ನಡೆಸಿಕೊಟ್ಟರು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜಯಂತಿ ಅಕ್ಕ ಅವರು ಧ್ಯಾನ, ಸಂಕಲ್ಪ ಮತ್ತು ಶಾಂತಿಮಂತ್ರವನ್ನು ನಡೆಸಿಕೊಟ್ಟರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಶಾಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಜಿಪಂ ಸಿಇಒ ಭರತ್ ಎಸ್., ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್. ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಯೋಗಾಸಕ್ತರು, ಶಾಲಾ ವಿದ್ಯಾರ್ಥಿಗಳು, ಸಂಘ ಸಂಸ್ಥೆಯವರು ಇದ್ದರು. ಡಾ. ಅಶೋಕ ಮತ್ತಿಕಟ್ಟಿ ಯೋಗ ಪ್ರಾರ್ಥನೆ ಪ್ರಸ್ತುತಪಡಿಸಿದರು.ಶಾಲಾ ವಿದ್ಯಾರ್ಥಿಗಳು, ಯೋಗಾಸಕ್ತರು, ವಿವಿಧ ಇಲಾಖೆ ಅಧಿಕಾರಿಗಳು ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.