ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಬಲಿಜ ಸಮುದಾಯ ಭವನದಲ್ಲಿ ರಾಮನಗರ ಪಿರಮಿಡ್ ಧ್ಯಾನ ಮಂದಿರದ ವತಿಯಿಂದ ಆಯೋಜಿಸಿದ್ದ ‘ಧ್ಯಾನಯೋಗ ಮತ್ತು ಪ್ರವಚನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನುಷ್ಯನಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಕಾಯಿಲೆಗಳು ಬರುತ್ತಿರುವುದರಿಂದ, ನಾವು ಲಕ್ಷಾಂತರ ರು.ಗಳನ್ನು ಖರ್ಚು ಮಾಡಬೇಕಾಗಿದೆ. ಮನುಷ್ಯ ನಿಗೆ ಕೋಪವು ಅತೀ ದೊಡ್ಡ ಶತ್ರುವಾಗಿದ್ದು, ಇದನ್ನು ಯೋಗ ಮತ್ತು ಧ್ಯಾನಗಳಿಂದ ಮಾತ್ರ ಹೋಗಲಾಡಿಸಬಹುದು ಎಂದು ಹೇಳಿದರು.ಮಹಿಳೆಯರು ಮನೆ ಮತ್ತು ಕಚೇರಿ ಕೆಲಸದಲ್ಲಿ ಹೆಚ್ಚಿನ ಒತ್ತಡ ಇರುವುದರಿಂದ ದಿನ ನಿತ್ಯ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳ ಬಹುದು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು,ಧ್ಯಾನ ರೂಢಿಸಿಕೊಳ್ಳಬೇಕು. ಅವು ನಿಮಗೆ ಶಕ್ತಿಯನ್ನು ತುಂಬುತ್ತವೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ಮೈಗೂಡಿಸಿಕೊಳ್ಳಬೇಕು, ಕೀಳರಿಮೆ ಹೊಂದಿ ಯಾವುದೇ ಸಂದರ್ಭದಲ್ಲಿಯೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದರು.
ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ದೃಷ್ಟಿಯಿಂದ ಸಸ್ಯಾಹಾರಿ ಆಹಾರವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಫೈಬರ್, ಧಾನ್ಯಗಳು, ಕಾಳುಗಳು, ಬೀಜಗಳು ಇತ್ಯಾದಿ ಹೃದಯ ಮತ್ತು ದೇಹದ ಆರೋಗ್ಯಕ್ಕೆ ಉತ್ತಮವಾದ ಕಾರಣ, ಸಸ್ಯ ಆಧಾರಿತ ಆಹಾರವು ಉತ್ತಮ ಹೃದಯದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಇದು ಕಡಿಮೆ ರಕ್ತದೊತ್ತಡ, ಮೂಳೆಗಳನ್ನು ಸದೃಢಗೊಳಿಸುವುದು, ತೂಕ ನಿರ್ವಹಣೆ ಮತ್ತು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಸದಾನಂದಗಿರಿ ಮಹಾರಾಜ್ ಸ್ವಾಮೀಜಿ ಎಂದು ಹೇಳಿದರು.
ರಾಮನಗರ ಪಿರಮಿಡ್ ಧ್ಯಾನ ಕೇಂದ್ರದಲ್ಲಿ ಪ್ರತಿದಿನ ಉಚಿತವಾಗಿ ಯೋಗ ತರಬೇತಿ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಇಂದು ಒತ್ತಡದಲ್ಲಿ ಬದುಕುತ್ತಿದ್ದಾನೆ. ಹಾಗಾಗಿ ಅವರು ಯೋಗಾಸನ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.