ಜಗತ್ತಿನ 37ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಯೋಗ ದಿನ ಆಚರಣೆ

KannadaprabhaNewsNetwork |  
Published : Jun 22, 2025, 01:18 AM IST
21ಎಚ್‌ಯುಬಿ21ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬಿಜೆಪಿ ವತಿಯಿಂದ ಯೋಗ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಶಾಸಕ ಮಹೇಶ ಟೆಂಗಿನಕಾಯಿ ಸೇರಿ ಹಲವರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಭಾರತೀಯ ಸಂಸ್ಕೃತಿ, ಸನಾತನ ಕಾಲದ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.

ಹುಬ್ಬ‍ಳ್ಳಿ: ಅಂತಾರಾಷ್ಟ್ರೀಯ ಯೋಗ ದಿನವನ್ನು ಜಗತ್ತಿನ ಸುಮಾರು 37ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸಂಸ್ಕೃತಿ, ಸನಾತನ ಕಾಲದ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಇಲ್ಲಿಯ ನೃಪತುಂಗ ಬೆಟ್ಟದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಯೋಗದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗ ಶಿಕ್ಷಕ ನರೇಂದ್ರ ಕುಪಸದ, ಬಿಜೆಪಿ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಲಿಂಗರಾಜ ಪಾಟೀಲ, ಪಾಲಿಕೆ ಸದಸ್ಯರಾದ ವೀಣಾ ಬರದ್ವಾಡ, ಸಂತೋಷ್ ಚೌಹಾಣ್, ರೂಪಾ ಶೆಟ್ಟಿ, ಪ್ರಮುಖರಾದ ಸಿದ್ದು ಮೊಗಲಿ ಶೆಟ್ಟರ್, ಮಹೇಂದ್ರ ಕೌತಾಳ, ದತ್ತಮೂರ್ತಿ ಕುಲಕರ್ಣಿ, ಈಶ್ವರ್ ಗೌಡ ಪಾಟೀಲ, ಚೆನ್ನು ಹೊಸಮನಿ ರವಿ ನಾಯಕ, ರಘು ಧಾರವಾಡಕರ ಮೊದಲಾದವರು ಉಪಸ್ಥಿತರಿದ್ದರು.ವಿಶ್ವಕ್ಕೆ ಭಾರತೀಯ ಸಂಸ್ಕೃತಿ ಕೊಟ್ಟ ಅತ್ಯಮೂಲ್ಯ ಕೊಡುಗೆ ಯೋಗ: ಜೋಶಿ

ಹುಬ್ಬಳ್ಳಿ: ಯೋಗ ಕೇವಲ ಶಾರೀರಿಕ ವ್ಯಾಯಾಮವಲ್ಲ, ಅದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನ ಸಾಧಿಸುವ ಶ್ರೇಷ್ಠ ಪಥವಾಗಿದೆ. ನಮ್ಮ ಭಾರತೀಯ ಸಂಸ್ಕೃತಿ ಕೊಟ್ಟ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು ಎಂದು ಕ್ಷಮತಾ ಸಂಚಾಲಕ ಗೋವಿಂದ ಜೋಶಿ ಹೇಳಿದರು.

ವಿಶ್ವಯೋಗದಿನ ಆಚರಣೆಯ ಅಂಗವಾಗಿ ಕೇಂದ್ರ ಸಚಿವ ಪ್ರಹ್ಸಾದ್‌ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯೋಸ್ಮಿ ಯೋಗ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ದೇಶಪಾಂಡೆ ನಗರದ ಜಿಮಖಾನಾ ಮೈದಾನದಲ್ಲಿ ಏರ್ಪಡಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು. ಧನ್ಯೋಸ್ಮಿ ಯೋಗ ಕೇಂದ್ರದ ಸಂಸ್ಥಾಪಕ ವಿನಾಯಕ ತೆಲಗೇರಿ, ಖ್ಯಾತ ನರರೋಗ ತಜ್ಞ ಡಾ. ಅನಿರುದ್ದ ಕುಲಕರ್ಣಿ ಮಾತನಾಡಿದರು. ನಯನಾ ದೇಸಾಯಿ ಸ್ವಾಗತಿಸಿದರು. ಪ್ರೇಮಾನಂದ ಶೆಟ್ಟಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಯೋಗ ಪಟುಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ನೂರಾರು ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ