ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲಾಡಳಿತ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್. ಘಟಕಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಮುಖ್ಯ ಕಾರ್ಯಕ್ರಮ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಜೂ.21ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ ಎಂದರು.ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಮಹಿಳಾ ಸಬಲೀಕರಣಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಜಿಲ್ಲೆಯ ಪ್ರತಿ ಮನೆಗೂ ಯೋಗದ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂತೋಷ್ ಕುಮಾರ್ ಹೇಳಿದರು.
ಯೋಗ ಪ್ರದರ್ಶನ ಉತ್ತಮವಾಗಿ ಮೂಡಿಬರಲು ಅನುಕೂಲವಾಗುವಂತೆ ಯೋಗಕ್ಕೆ ಅಗತ್ಯವಿರುವ ಮ್ಯಾಟ್ ಹಾಗೂ ಇತರೆ ಪರಿಕರಗಳನ್ನು ಸಜ್ಜುಗೊಳಿಸಿಕೊಳ್ಳಬೇಕು. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸುವಂತೆ ಹೇಳಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಮಾತನಾಡಿ, ಜಿಲ್ಲೆಯ ಶಾಲೆ ಕಾಲೇಜುಗಳು, ವಸತಿ ಶಾಲೆಗಳು, ಆಯುಷ್ ಆರೋಗ್ಯ ಮಂದಿರಗಳು ಮತ್ತು ಸಂಘ ಸಂಸ್ಥೆಗಳಲ್ಲಿ ಸುಮಾರು 1 ಲಕ್ಷ ಯೋಗಾಸಕ್ತರಿಗೆ ಯೋಗ ತರಬೇತಿಗಳನ್ನು ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಯೋಗೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.