ಅಂ.ರಾ. ಯೋಗ ದಿನಾಚರಣೆ: ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

KannadaprabhaNewsNetwork |  
Published : Jun 13, 2025, 02:34 AM IST
ಯೋಗ | Kannada Prabha

ಸಾರಾಂಶ

ಪ್ರತಿ ವರ್ಷ ಜೂ.21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಪದವಿ ವಿದ್ಯಾರ್ಥಿಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿಪ್ರತಿ ವರ್ಷ ಜೂ.21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಪದವಿ ವಿದ್ಯಾರ್ಥಿಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಮಾತನಾಡಿ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಕಳೆದ 36 ವರ್ಷಗಳ ಹಿಂದೆ ಆರಂಭವಾಗಿ ಸತತವಾಗಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ನೀಡುತ್ತಾ ಬಂದಿದೆ. ತನ್ನ ವಿದ್ಯಾರ್ಥಿಗಳಿಗೆ ಕಲಿಸುತ್ತಿದೆ ಎಂದರು.

ಕರ್ನಾಟಕ ವಿಶ್ವ ವಿದ್ಯಾಲಯದ ಪ್ರೊಫೆಸರ್ ಡಾ. ಛಲವಾದಿ ಅತಿಥಿಯಾಗಿ ಆಗಮಿಸಿದ್ದರು.

ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಮಾತನಾಡಿ, ಯೋಗವನ್ನು ನಮ್ಮ ನಿತ್ಯಜೀವನದಲ್ಲಿ ಯಾಕೆ ಅಡವಡಿಸಿ ಕೊಳ್ಳಬೇಕು ಮತ್ತು ಅದರ ಉಪಯೋಗವನ್ನು ವಿಸ್ತಾರವಾಗಿ ತಿಳಿಸಿದರು.

ಕಾಲೇಜಿನ ಯೋಗ ವಿಭಾಗದ ಮುಖ್ಯಸ್ಥ ಹಾಗೂ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗವು ಯಾವ ರೀತಿಯಲ್ಲಿ ಪ್ರಸಿದ್ಧಿ ಪಡೆಯುತ್ತಿದೆ ಹಾಗೂ ಪಾಶ್ಚಾತ್ಯ ದೇಶಗಳು ಯಾವ ಉದ್ದೇಶದೊಂದಿಗೆ ಒಲವು ತೋರಿಸುತ್ತಿವೆ ಎಂದು ವಿವರಿಸಿದರು. ಕಾಲೇಜಿನ ಉಪಪ್ರಾಂಶುಪಾಲೆ ಡಾ. ಸುಜಾತಾ ಕೆ.ಜೆ. ಹಾಗೂ ನ್ಯೂಟ್ರಿಷನ್ ವಿಭಾಗದ ಮುಖ್ಯಸ್ಥೆ ಡಾ. ಗೀತಾ ಬಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು..ಸುಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಡಾ. ಸುಜಾತಾ ಕೆ.ಜೆ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ