ಮನಸ್ಸಲ್ಲಿ ಏಕಾಗ್ರತೆ ಮೂಡಿಸಲು ಯೋಗ ಸಹಕಾರಿ: ಡಾ. ಚಂದ್ರಕಾಂತ

KannadaprabhaNewsNetwork |  
Published : Oct 31, 2026, 01:30 AM IST
ಚಿತ್ರ 30ಬಿಡಿಆರ್54 | Kannada Prabha

ಸಾರಾಂಶ

ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ ಪಾತ್ರ ವಹಿಸುತ್ತದೆ. ಯೋಗವು ದೇಹವನ್ನು ಸದೃಢಗೊಳಿಸುವುದರ ಜತೆಗೆ ಮನಸ್ಸಿನ ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಬೀದರ್‌ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಚಂದ್ರಕಾಂತ ಗಂಗಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್

ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ ಪಾತ್ರ ವಹಿಸುತ್ತದೆ. ಯೋಗವು ದೇಹವನ್ನು ಸದೃಢಗೊಳಿಸುವುದರ ಜತೆಗೆ ಮನಸ್ಸಿನ ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಬೀದರ್‌ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಚಂದ್ರಕಾಂತ ಗಂಗಶೆಟ್ಟಿ ಹೇಳಿದರು.

ಚಿಟಗುಪ್ಪಾ ತಾಲೂಕಿನ ಬೋರಾಳ ಗ್ರಾಮದ ಎಸ್.ಆರ್. ಪದವಿ ಪೂರ್ವ ಕಾಲೇಜು ಹಾಗೂ ಶೆಫರ್ಡ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಉಪನಿರ್ದೇಶಕರ ಕಚೇರಿ ಬೀದರ್‌ ಹಾಗೂ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ 2026-27ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಎರಡು ದಿನಗಳ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳಿಂದ ಸುಮಾರು 400 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.

ಗ್ರಾಮೀಣ ಪ್ರದೇಶವಾದ ಬೋರಾಳದಲ್ಲಿ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಿರುವುದು ಸಂತಸದ ಸಂಗತಿಯಾಗಿದೆ. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಹಾಗೂ ರಾಜ್ಯಮಟ್ಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿವೆ. ಯೋಗವನ್ನು ಕೇವಲ ಸ್ಪರ್ಧೆಗೆ ಸೀಮಿತಗೊಳಿಸದೆ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಹಾಗೂ ಆರ್.ಆರ್.ಆರ್. ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಕಿರಣ್ ಪಾಂಡುರಂಗ ಮಾತನಾಡಿ, ನಮ್ಮ ಸಂಸ್ಥೆಯ ಆವರಣದಲ್ಲಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಹಾಗೂ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಸಹಕಾರ ನೀಡಲಾಗುತ್ತಿದೆ. ಇಂತಹ ಕ್ರೀಡಾಕೂಟಗಳು ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶ ಕಲ್ಪಿಸುತ್ತವೆ ಎಂದರು.

ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಓಂಪ್ರಕಾಶ ಧಡ್ಡೆ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಯೋಗಾಭ್ಯಾಸಕ್ಕೂ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು. ಯೋಗವು ಆರೋಗ್ಯಕರ ಜೀವನಶೈಲಿಗೆ ಪೂರಕವಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ವೀಕ್ಷಕರಾದ ಲಿಂಗರಾಜ್ ಎಸ್., ಶಶಿಕುಮಾರ ಅಕ್ಕಿ, ಹಾವೇರಿ ಯೋಗ ನಿರ್ದೇಶಕ ಪ್ರೇಮಕುಮಾರ, ಸಂಸ್ಥೆಯ ಕಾರ್ಯದರ್ಶಿ ರಾಘವೇಂದ್ರ ಕಿರಣ, ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯವಸ್ಥಾಪಕ ಸಂಗನಬಸವ ಗೊರಟಾ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಬಿರಾದಾರ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ ಕೊಸಂ, ಕಾರ್ಯಾಧ್ಯಕ್ಷ ಶ್ರೀಕಾಂತ ದಾಡಗೆ, ಕಾರ್ಯದರ್ಶಿ ಸೂರ್ಯಕಾಂತ ಐನಾಪೂರೆ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸರೋಜಾ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ