ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ಶುಕ್ರವಾರ ನೆಹರು ಅಂತಾರಾಷ್ಟ್ರೀಯ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ ಹಾಗೂ ಅಂತಾರಾಷ್ಟ್ರೀಯ ಸಂಗೀತ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಯೋಗದಿಂದ ವ್ಯಕ್ತಿ ಏನೆಲ್ಲ ಸಾಧಿಸಬಹುದಾಗಿದೆ. ಇಡೀ ವಿಶ್ವ ಯೋಗ ಈಗ ಅವಲಂಭಿಸಿದೆ. ಆರೋಗ್ಯಕರ ಜೀವನಕ್ಕೆ ಮತ್ತು ದೇಹದ ಸಮತೋಲನ ಕಾಯ್ದುಕೊಳ್ಳಲು ಯೋಗ ಬಹಳಷ್ಟು ಸಹಕಾರಿಯಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಯೋಗಭ್ಯಾಸ ರೂಢಿಸಿಕೊಂಡು ಏಕಾಗ್ರತೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಓದು ಬರಹಕ್ಕೆ ಹಾಗೂ ಆರೋಗ್ಯವೃದ್ಧಿಗೆ ಯೋಗ ಒಂದು ದೊಡ್ಡ ಔಷಧವಾಗಿದೆ ಎಂದರು.
ಯೋಗ ಪಟುಗಳಾದ ಸಹನಾ ಮಾನುಟಗಿ ಮತ್ತು ಸುಪ್ರೀತಾ ಅರಕಾಲಚಿಟ್ಟಿ ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸದ ಕೊಡುಗೆಗಳನ್ನು ವಿವರಿಸಿ ಮತ್ತು ಪ್ರಾತ್ಯಕ್ಷಿಕೆ ನೀಡಿದರು. ಶಾಲೆಯ ದೈಹಿಕ ಶಿಕ್ಷಕರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳು ಸಂಗೀತವನ್ನು ಪ್ರಸ್ತುತ ಪಡಿಸಿದರು.