ಒತ್ತಡ ನಿವಾರಣೆಗೆ ಯೋಗ ಸಹಾಯಕ

KannadaprabhaNewsNetwork |  
Published : Jun 22, 2025, 01:18 AM IST
ಮೂಡಲಗಿ ಪಟ್ಟಣದ ಆರ್.ಡಿ.ಶಿಕ್ಷಣ ಸಂಸ್ಥೆಯಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ದತ್ತಾತ್ರಯಬೋಧ ಮಹಾಸ್ವಾಮೀಜಿ ಮತ್ತು ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಗಣ್ಯರು, ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು. | Kannada Prabha

ಸಾರಾಂಶ

ಯೋಗವು ಮಾನವ ಜೀವನದ ಸಮಗ್ರ ಅಭಿವೃದ್ಧಿಗೆ ಸಹಾಯಕವಾಗಿದೆ. ದಿನನಿತ್ಯದ ಜೀವನದಲ್ಲಿ ಶಾಂತಿ ಮತ್ತು ಸಮತೋಲನ, ಕೆಲಸದೊತ್ತಡ, ಆತಂಕ ನಿವಾರಣೆಗೆ ಸಹಾಯಕವಾಗಿದೆ.

ಕನ್ನಡಪ್ರಭ ವಾರ್ತೆ ಮೂಡಲಗಿ

ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ದಾರಿ ಮಾಡಿ ಕೊಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ದೇಹ, ಮನಸ್ಸು ಹಾಗೂ ಆತ್ಮದ ಮಧ್ಯೆ ಸಮತೋಲನ ಸಾಧಿಸುವುದೇ ಯೋಗ ಎಂದರು. ಯೋಗವು ಮಾನವ ಜೀವನದ ಸಮಗ್ರ ಅಭಿವೃದ್ಧಿಗೆ ಸಹಾಯಕವಾಗಿದೆ. ದಿನನಿತ್ಯದ ಜೀವನದಲ್ಲಿ ಶಾಂತಿ ಮತ್ತು ಸಮತೋಲನ, ಕೆಲಸದೊತ್ತಡ, ಆತಂಕ ನಿವಾರಣೆಗೆ ಸಹಾಯಕವಾಗಿದೆ. ಮಕ್ಕಳಿಂದ ಹಿಡಿದು ಹಿರಿಯರತನಕ ಯೋಗವನ್ನು ಮಾಡಬಹುದಾಗಿದೆ. ಇದರಿಂದ ಶಾರೀರಿಕ, ಶಕ್ತಿ ವರ್ಧನೆ, ರೋಗ ನಿರೋಧಕ ಶಕ್ತಿಯು ಹೆಚ್ಚಳವಾಗುತ್ತದೆ. ರಕ್ತ ಸಂಚಾರ ಸುಧಾರಣೆಗೂ ಯೋಗವು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯವರಿಂದಾಗಿ ಯೋಗ ದಿನಕ್ಕೆ ಮತ್ತಷ್ಟು ಕಳೆ ಬಂದಿದೆ. ಋಷಿ- ಮುನಿಗಳ ಕಾಲದಿಂದಲೂ ಯೋಗಕ್ಕೆ ಅತೀ ಮಹತ್ವ ಸ್ಥಾನ ಪಡೆದಿದೆ. ಯೋಗವು ಹುಟ್ಟಿರುವುದೇ ನಮ್ಮ ಭಾರತದಿಂದ. ಸನಾತನ ಕಾಲದಿಂದಲೂ ಇದು ಮುಂದುವರೆದಿದೆ. ಇಂದು ಜಾಗತೀಕವಾಗಿ ಯೋಗಕ್ಕೆ ಮಹತ್ವ ಬಂದಿರುವುದಾದರೆ ಅದು ನಮ್ಮ ಹೆಮ್ಮೆಯ ಭಾರತದಿಂದ ಎಂಬುವುದನ್ನು ಯಾರೂ ಮರೆಯಬಾರದು ಎಂದರು.

ಮೂಡಲಗಿ ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಯೋಗ ದಿನಾಚರಣೆ ಅತಿ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಇಲ್ಲಿನ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸುವ ಮೂಲಕ ಯೋಗ ದಿನವನ್ನು ಹಬ್ಬದಂತೆಯೇ ನಡೆಸಿಕೊಟ್ಟರು. ಅದಕ್ಕಾಗಿ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಅರ್ಪಿಸಿದರು.

ಪಟ್ಟಣದ ಆರ್‌.ಡಿ.ಎಸ್ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕರು ಭಾಗವಹಿಸಿ ಯೋಗಾಭ್ಯಾಸ ಮಾಡಿದರು. ಪುರಸಭೆ ಸದಸ್ಯರು, ಸಹಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಯುವಕರು, ಯುವತಿಯರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ವಿವಿಧ ಯೋಗಾಸನ, ಪ್ರಾಣಾಯಾಮ ಮಾಡಿದರು. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಮುಂದಾಳತ್ವದಲ್ಲಿ ಯೋಗ ದಿನಾಚರಣೆ ಶಿಸ್ತು ಬದ್ಧವಾಗಿ ನಡೆಸಲಾಯಿತು. ಪಟ್ಟಣದ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಮಹಾಸ್ವಾಮೀಜಿ ಮತ್ತು ಬಾಲಚಂದ್ರ ಜಾರಕಿಹೊಳಿಯವರು ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಯೋಗಾಸಕ್ತರೊಂದಿಗೆ ಬೆರೆತು ವಿವಿಧ ಆಸನಗಳನ್ನು ಮಾಡಿದರು.

ಬಿಜೆಪಿ (ಗ್ರಾ) ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ತಹಸೀಲ್ದಾರ್‌ ಶಿವಾನಂದ ಬಬಲಿ, ಆರ್.ಡಿ.ಎಸ್.ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಂತೋಷ ಪಾರ್ಶಿ, ತಾಪಂ ಇಒ ಎಫ್.ಎಸ್.ಚಿನ್ನನ್ನವರ, ಬಿಇಒ ಎ.ಸಿ.ಮನ್ನಿಕೇರಿ, ಸಿಡಿಪಿಒ ಯಲ್ಲಪ್ಪ ಗದಾಡಿ, ಮೂಡಲಗಿ ಪಿಐ ಶ್ರೀಶೈಲ ಬ್ಯಾಕೋಡ, ಘಟಪ್ರಭಾ ಪಿಐ ಎಚ್.ಡಿ.ಮುಲ್ಲಾ, ಪುರಸಭೆ ಸದಸ್ಯರು, ಮಾಜಿ ಸದಸ್ಯರು, ಮುಖ್ಯಾಧಿಕಾರಿ ತುಕಾರಾಮ ಮಾದರ, ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಅನೇಕರು ಪಾಲ್ಗೊಂಡಿದ್ದರು. ಕಲ್ಲೊಳಿಯ ಸ್ಥಿತ ಪ್ರಜ್ಞ ಫೌಂಡೇಶನ್ ಆನಂದ ಚಿಕ್ಕೋಡಿ ಮತ್ತವರ ತಂಡದವರು ಯೋಗದ ಬಗ್ಗೆ ಮಾಹಿತಿ ನೀಡಿದರು. ರಾಷ್ಟ್ರೀಯ ಯೋಗಪಟು ಬಳೋಬಾಳ ಗ್ರಾಮದ ಕುಮಾರಿ ಬಡವಣ್ಣಿ ಅವಳು ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!