ಯೋಗ ಬದುಕಿಗೆ ಹೊಸ ಚೈತನ್ಯ ನೀಡುವ ಜೀವನಶೈಲಿ

KannadaprabhaNewsNetwork |  
Published : Jun 24, 2026, 03:30 AM IST
ಪೋಟೊ21ಕೆಎಸಟಿ2: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. | Kannada Prabha

ಸಾರಾಂಶ

ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್,ಟಿವಿ ಹಾಗೂ ಇತರ ಗ್ಯಾಜೆಟ್‌ಗಳ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ದೈಹಿಕ ಚಟುವಟಿಕೆ ಕಡಿಮೆಯಾಗುತ್ತಿವೆ

ಕುಷ್ಟಗಿ: ಯೋಗ ದೇಹಕ್ಕೆ ಶಕ್ತಿ,ಮನಸ್ಸಿಗೆ ನೆಮ್ಮದಿ ಮತ್ತು ಬದುಕಿಗೆ ಹೊಸ ಚೈತನ್ಯ ನೀಡುವ ಜೀವನಶೈಲಿಯಾಗಿದೆ ಎಂಬ ಸಂದೇಶದೊಂದಿಗೆ ತಾಲೂಕಿನ ದೋಟಿಹಾಳ ಸರ್ಕಾರಿ ಪ್ರೌಢಶಾಲೆಯಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಒಂದೇ ವೇದಿಕೆಯಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿ ಆರೋಗ್ಯಕರ ಬದುಕಿನ ಸಂಕಲ್ಪ ಕೈಗೊಂಡರು.

ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಡಿ.ಸುರೇಶ, ಯೋಗ ಕೇವಲ ದೈಹಿಕ ವ್ಯಾಯಾಮವಲ್ಲ ದೇಹ,ಮನಸ್ಸು ಮತ್ತು ಆತ್ಮದ ಸಮತೋಲನ ಕಾಪಾಡುವ ಅತ್ಯುತ್ತಮ ಜೀವನ ಪದ್ಧತಿಯಾಗಿದೆ ಎಂದರು. ಇಂದಿನ ಸ್ಪರ್ಧಾತ್ಮಕ ಮತ್ತು ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳು ಯೋಗವನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ ಪ್ರತಿದಿನದ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಬೇಕು. ಇದರಿಂದ ಏಕಾಗ್ರತೆ, ನೆನಪಿನ ಶಕ್ತಿ, ಆತ್ಮವಿಶ್ವಾಸ ಮತ್ತು ಶಿಸ್ತು ಬೆಳೆಯುವುದರೊಂದಿಗೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ತಿಳಿಸಿದರು.

ದೈಹಿಕ ಶಿಕ್ಷಕ ಜಗದೀಶ್ ಸೂಡಿ ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್,ಟಿವಿ ಹಾಗೂ ಇತರ ಗ್ಯಾಜೆಟ್‌ಗಳ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ದೈಹಿಕ ಚಟುವಟಿಕೆ ಕಡಿಮೆಯಾಗುತ್ತಿವೆ.ಇದರ ಪರಿಣಾಮ ಮಾನಸಿಕ ಒತ್ತಡ, ಏಕಾಗ್ರತೆಯ ಕೊರತೆ ಹಾಗೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿವೆ.ಇಂತಹ ಸಂದರ್ಭದಲ್ಲಿ ಪ್ರತಿದಿನ ಕನಿಷ್ಠ 20 ನಿಮಿಷಗಳ ಯೋಗಾಭ್ಯಾಸ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ನೆನಪಿನ ಶಕ್ತಿ, ಧನಾತ್ಮಕ ಚಿಂತನೆ ಮತ್ತು ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ದೈಹಿಕ ಶಿಕ್ಷಕ ಹಿದಾಯತ್‌ ನೀಲಗಾರ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನ ಹಾಗೂ ಪ್ರಾಣಾಯಾಮದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಯೋಗಾಸನ ಪ್ರದರ್ಶಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಆರೋಗ್ಯಕರ ಜೀವನದ ಮಹತ್ವ ಅರಿತುಕೊಂಡರು. ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇವಿನ ಹಣ್ಣಿಗೆ ಭಾರಿ ಬೇಡಿಕೆ
ಕಾರ್ಖಾನೆ ಬಾಧಿತ ಹಳ್ಳಿಗಳಿಗೆ ಸಿಎಂ ಭೇಟಿ ನೀಡಲಿ