ಮಂಗಳೂರು: 2014 ರಲ್ಲಿ ಪ್ರಾರಂಭಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ ಜಾಗತಿಕ ಮಟ್ಟದಲ್ಲಿ ಸಿಕ್ಕ ಗೌರವವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾಧಿಕಾರಿ ದರ್ಶನ್, ಜಿಲ್ಲಾ ಸರ್ಜನ್ ಡಾ. ಶಿವಪ್ರಕಾಶ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಡಿಸಿಪಿ ರವಿಶಂಕರ್, ಎಎಸ್‌ಪಿ ಅನಿಲ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ ಇದ್ದರು.ಯೋಗದಲ್ಲಿ ವಿಶ್ವ ದಾಖಲೆ ಮಾಡಿದ ಕಡಬ ತಾಲೂಕಿನ ಏನಕಲ್ಲು ನಿವಾಸಿ, 6 ನೇ ತರಗತಿ ವಿದ್ಯಾರ್ಥಿ ಅಕ್ಷಯ ಬಿ. ಎಂ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಣಿಕರ್ಣಿಕಾ ಸ್ವಾಗತಿಸಿದರು. ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ನೇತೃತ್ವದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.