ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ: ಪವಿತ್ರ

KannadaprabhaNewsNetwork |  
Published : Jun 20, 2026, 02:45 AM IST
ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಮಹಿಳಾ ಘಟಕದ ವತಿಯಿಂದ ಇಲ್ಲಿನ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವಾಲಯದ ಸಭಾಂಗಣದಲ್ಲಿ ಯೋಗ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ  | Kannada Prabha

ಸಾರಾಂಶ

ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅಗತ್ಯ ಎಂದು ಯೋಗ ಶಿಕ್ಷಕಿ ಪವಿತ್ರ ಹೇಳಿದರು.

ನಾಪೋಕ್ಲು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅಗತ್ಯ ಎಂದು ಯೋಗ ಶಿಕ್ಷಕಿ ಪವಿತ್ರ ಹೇಳಿದರು.

ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಮಹಿಳಾ ಘಟಕದ ವತಿಯಿಂದ ಇಲ್ಲಿನ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವಾಲಯದ ಸಭಾಂಗಣದಲ್ಲಿ ಶುಕ್ರವಾರ ಯೋಗ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯೋಗಭ್ಯಾಸದಿಂದ ಒಬ್ಬ ವ್ಯಕ್ತಿ ಶಾರೀರಿಕ ದೃಢತೆ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಾನೆ. ನಿರಂತರ ಯೋಗದಿಂದ ವ್ಯಕ್ತಿಗಳಲ್ಲಿ ತಾಳ್ಮೆ ,ಸಹನೆ, ಸಹಾನುಭೂತಿ, ಪ್ರೀತಿ, ವಾತ್ಸಲ್ಯ ಸಹಜವಾಗಿ ಮೈಗೂಡಿಕೊಳ್ಳುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದರು.

ನೇತಾಜಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಸಿ. ಎಸ್. ಸುರೇಶ್ ಮಾತನಾಡಿ, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಯೋಗ ಮಾಡಬಹುದು ಎಂದರು.

ಮಡಿಕೇರಿ ತಾಲೂಕು ನಿಮಾ (ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ )ಮಹಿಳಾ ಘಟಕದ ಕೊಡಗು ಜಿಲ್ಲಾ ಕಾರ್ಯದರ್ಶಿ ಸೌಮ್ಯ ಪ್ರಸ್ತಾವಿಕವಾಗಿ ಮಾತನಾಡಿ ಸರ್ಕಾರಿ ಮತ್ತು ಖಾಸಗಿ ವೈದ್ಯರ ಸಂಘ ನಿಯಮ 25 ವರ್ಷಗಳದ್ದು ಪೂರೈಸಿದ್ದು ಜಿಲ್ಲೆಯ ವಿವಿಧಡೆ 25 ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಂದರು. ನಿಮಾ (ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ )ಕೊಡಗು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಡಾ.ಶೈಲಜಾ,ಸದಸ್ಯ ಡಾ.ರಾಜೇಂದ್ರ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಜನೆ ಕಾಲಹರಣಕ್ಕಲ್ಲ: ಶ್ರೀ ವೇದವರ್ಧನ ತೀರ್ಥರು
ಫ್ಲೆಕ್ಸ್ ತೆರವಿಗೆ ವಿರೋಧ: ಪುರಸಭೆಗೆ ಮುತ್ತಿಗೆ ಪ್ರತಿಭಟನೆ