ಕಾರಟಗಿ: ನಗರದ ಪ್ರಮುಖ ವಿದ್ಯಾಸಂಸ್ಥೆ ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ವಿದ್ಯಾರ್ಥಿಗಳಲ್ಲಿ ದೈಹಿಕ ಶಕ್ತಿ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುವ ಸದಾಶಯದೊಂದಿಗೆ, ಕಳೆದ ಒಂದು ವಾರದಿಂದ ಶಾಲೆಯಲ್ಲಿ ವಿಶೇಷ ಯೋಗ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಪತಂಜಲಿ ಯೋಗ ಸಂಸ್ಥೆಯ ತರಬೇತುದಾರ ಚಿಟ್ಟೂರಿ ಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಸತತವಾಗಿ ಯೋಗದ ವಿವಿಧ ಆಸನಗಳು ಮತ್ತು ಪ್ರಾಣಾಯಾಮದ ತರಬೇತಿ ನೀಡಿದ್ದರು. ಈ ಯಶಸ್ವಿ ಒಂದು ವಾರದ ಯೋಗ ಶಿಬಿರದ ಮುಕ್ತಾಯದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ನೂರಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಿಸ್ತುಬದ್ಧವಾಗಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಆಡಳಿತಾಧಿಕಾರಿ ಶ್ರೀಮನ್ ನಾರಾಯಣ, ಐಸಿಎಸ್‌ಸಿ ವಿಭಾಗದ ಪ್ರಾಂಶುಪಾಲ ಮುರಳೀಕೃಷ್ಣ, ಪ್ರಾಚಾರ್ಯ ಡಾ. ಮಹಮ್ಮದ್ ರಫೀಕ್, ಕೆಎಸ್‌ಎಸ್ ಸಂಸ್ಥೆಯ ಸಂಯೋಜಕಿ ಶ್ರೀದೇವಿ ಕೊಲ್ಲಾ ಉಪಸ್ಥಿತರಿದ್ದರು.