ಜಿಮ್‌ಗಿಂತಲೂ ಯೋಗ ಹೆಚ್ಚು ಸಹಕಾರಿ- ಶಾಸಕ ಪಾಟೀಲ

KannadaprabhaNewsNetwork |  
Published : Sep 01, 2025, 01:04 AM IST
ಬೆನಹಾಳ ಸಿ.ಬಿ.ಪಾಟೀಲ ಸರಕಾರಿ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ನರಗುಂದ ಶಾಸಕ ಸಿ.ಸಿ.ಪಾಟೀಲ ಉದ್ಘಾಟಿಸಿದರು | Kannada Prabha

ಸಾರಾಂಶ

ಇತ್ತೀಚಿಗಿನ ದೈಹಿಕ ಚಟುವಟಿಕೆ ರಹಿತ ಜೀವನ ಕ್ರಮದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಇದನ್ನು ನಿವಾರಿಸಲು ಕ್ರೀಡೆ ಅಗತ್ಯವಾಗಿದೆ. ಅದರಲ್ಲಿ ಜಿಮ್‌ಗೆ ಯುವಕರು ಮಾರು ಹೋಗುತ್ತಿದ್ದು, ಯೋಗ ಮಾಡಬೇಕು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಹೊಳೆಆಲೂರ: ಇತ್ತೀಚಿಗಿನ ದೈಹಿಕ ಚಟುವಟಿಕೆ ರಹಿತ ಜೀವನ ಕ್ರಮದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಇದನ್ನು ನಿವಾರಿಸಲು ಕ್ರೀಡೆ ಅಗತ್ಯವಾಗಿದೆ. ಅದರಲ್ಲಿ ಜಿಮ್‌ಗೆ ಯುವಕರು ಮಾರು ಹೋಗುತ್ತಿದ್ದು, ಯೋಗ ಮಾಡಬೇಕು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.ಅವರು ಸಮೀಪದ ಬೆನಹಾಳ ಗ್ರಾಮದ ಸಿ.ಬಿ. ಪಾಟೀಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ವಿವೇಕ ಯೋಜನೆ ಅಡಿ ಲೋಕೋಪಯೋಗಿ ಇಲಾಖೆ ₹32 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಿದ ಎರಡು ಶಾಲಾ ಕೊಠಡಿ ಉದ್ಘಾಟನೆ ಹಾಗೂ ಹೊಳೆಆಲೂರು ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ದೈಹಿಕ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಸ್ಥಾನ ಹೊಂದಿದ್ದು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯುವಂತೆ ಮಾಡುತ್ತದೆ. ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ದೇಶದ ಕೀರ್ತಿ ಬೆಳಗಬಹುದು ಎಂದು ಹೇಳಿದರು.

ಪ್ರಾಸ್ತವಿಕವಾಗಿ ಮಾತನಾಡಿದ ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಂಬೋಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಾಕಷ್ಟು ಕೊಡುಗೆ ನೀಡುತ್ತಿದ್ದು, ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಲು ಇಲಾಖೆಯೂ ಕ್ರೀಡಾಕೂಟ ಹಮ್ಮಿಕೊಳ್ಳುವ ಮೂಲಕ ಮಕ್ಕಳಿಲ್ಲ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷ ಹೂವಪ್ಪ ಜಂಗಣ್ಣವರ, ಎಸ್.ಡಿ.ಎಂ.ಸಿ ಅಧ್ಯಕ್ಷ ಮುತ್ತಣ್ಣ ಜಂಗಣ್ಣವರ, ಭೂ ದಾನಿಯಾದ ಶಶಿಧರಗೌಡ ಪಾಟೀಲ, ಮಾಜಿ ರಾಮನಗೌಡ ಪಾಟೀಲ, ಗಿರೀಶಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಎಂ.ಆರ್. ಗೌಡರ, ಶರಣಪ್ಪ ಹುನಗುಂಡಿ, ಮಲ್ಲಪ್ಪ ಹಡಪದ, ಬಸವರಾಜ ಜೊತೆಪ್ಪನವರ, ಅನಿತಾ ಪಾಟೀಲ, ಜಯಶ್ರೀ ಪಾಟೀಲ, ಕೆ.ಸಿ.ಪಾಟೀಲ ಸೇರಿದಂತೆ ಇತರರು ಇದ್ದರು.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ