ಮನಸ್ಸಿಗೆ ಶಾಂತಿ, ದೇಹಕ್ಕೆ ಚೈತನ್ಯ ನೀಡುವ ಯೋಗ ಅವಶ್ಯಕ: ಮಧು ಜಿ.ಮಾದೇಗೌಡ

KannadaprabhaNewsNetwork |  
Published : Jun 22, 2026, 02:00 AM IST
21ಕೆಎಂಎನ್ ಡಿ14 | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಜನತೆ ಹಾಗೂ ಯುವಕರು ದುಡಿಯುವ ಹಂಬಲದಲ್ಲಿ ಹೆಚ್ಚಿನ ಒತ್ತಡದಲ್ಲಿ ಸಿಲುಕಿ ದೇಹದ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸದೆ ನಾನಾ ಕಾಯಿಲೆಗಳಿಗೆ ತುತ್ತಾಗುತಿದ್ದಾರೆ. ಯೋಗದಿಂದ ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಬಹುದು. ಈ ನಿಟ್ಟಿನಲ್ಲಿ ಇಂದಿನ ಯುವ ಜನತೆ ಯೋಗದ ಕಡೆ ಹೆಚ್ಚಿನ ಆಸಕ್ತಿ ವಹಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮನಸ್ಸಿಗೆ ಶಾಂತಿ, ದೇಹಕ್ಕೆ ಚೈತನ್ಯ ಮತ್ತು ಬದುಕಿಗೆ ಹೊಸ ಉತ್ಸಾಹ ಪಡೆಯಲು ಯೋಗಾಭ್ಯಾಸ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.

ಭಾರತೀ ಕಾಲೇಜಿನ ಅವರಣದಲ್ಲಿ ಭಾರತಿ ಎಜುಕೇಷನ್ ಟ್ರಸ್ಟ್ ಹಾಗೂ ಜಿ.ಮಾದೇಗೌಡ ಇನ್ಸಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಮೂಹಿಕ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನತೆ ಹಾಗೂ ಯುವಕರು ದುಡಿಯುವ ಹಂಬಲದಲ್ಲಿ ಹೆಚ್ಚಿನ ಒತ್ತಡದಲ್ಲಿ ಸಿಲುಕಿ ದೇಹದ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸದೆ ನಾನಾ ಕಾಯಿಲೆಗಳಿಗೆ ತುತ್ತಾಗುತಿದ್ದಾರೆ. ಯೋಗದಿಂದ ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಬಹುದು. ಈ ನಿಟ್ಟಿನಲ್ಲಿ ಇಂದಿನ ಯುವ ಜನತೆ ಯೋಗದ ಕಡೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ವಿಶ್ವಕ್ಕೆ ಅತ್ಯುತ್ತಮ ದೈಹಿಕ ವ್ಯಾಯಾಮ ಯೋಗವನ್ನು ನೀಡಿದ ಕೀರ್ತಿ ಭಾರತ ದೇಶದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ದೇಹ ಹಾಗೂ ಮನಸ್ಸಿನ ನಡುವೆ ಸಮತೋಲನವನ್ನು ನಿರ್ಮಿಸುವ ಜೀವನ ಪದ್ಧತಿಯಾಗಿದೆ ಎಂದರು.

ಇಂದಿನ ಒತ್ತಡದ ಬದುಕಿನಲ್ಲಿ ಯೋಗವು ಆರೋಗ್ಯ, ನೆಮ್ಮದಿ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವ ಅತ್ಯುತ್ತಮ ಮಾರ್ಗವಾಗಿದೆ. ಯೋಗವು ದೈಹಿಕ ಆರೋಗ್ಯವನ್ನು ಕಾಪಾಡುವ ಜತೆಗೆ ಮಾನಸಿಕ ಸ್ಥೈರ್ಯ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೂ ಸಹಕಾರಿಯಾಗಿದೆ ಎಂದರು.

ಈ ವೇಳೆ ಮಳವಳ್ಳಿ ಪಂತಂಜಲಿ ಯೋಗ ಟ್ರಸ್ಟ್‌ನ ಅಧ್ಯಕ್ಷ ಯೋಗ ಗುರು ಮಲ್ಲಿಕಾರ್ಜನಸ್ವಾಮಿ ಸಾವಿರಾರು ವಿದ್ಯಾರ್ಥಿಗಳಿಗೆ ಯೋಗಭ್ಯಾಸ ಮಾಡಿಸಿದರು. ಈ ವೇಳೆ ಭಾರತೀ ಹೆಲ್ತ್ ಸೈನ್ಸ್‌ಸ್ ನಿರ್ದೇಶಕ ಡಾ.ತಮಿಜ್‌ಮಣಿ, ಭಾರತೀ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್.ನಾಗರಾಜು, ವಿವಿಧ ಅಂಗ ಸಂಸ್ಥೆ ಮುಖ್ಯಸ್ಥರಾದ ಪ್ರೊ.ಎಂ.ಎಸ್. ಮಹದೇವಸ್ವಾಮಿ, ಡಾ.ಎಸ್.ಎಲ್. ಸುರೇಶ್, ಡಾ. ಚಂದನ್, ಜಿ.ಕೃಷ್ಣ, ಸಿ.ವಿ.ಮಲ್ಲಿಕಾರ್ಜುನ, ಡಾ.ಬಾಲಸುಬ್ರಮಣ್ಯಂ, ಡಾ. ಶಾಂತಕುಮಾರ್, ಮಂಜು ಜೇಕಬ್, ಜಗದೀಶ್, ಜಿ.ಬಿ. ಪಲ್ಲವಿ, ಪುಟ್ಟಸ್ವಾಮಿ, ಪಿ.ರಾಜೇಂದ್ರರಾಜೇಅರಸ್, ರಮ್ಯ ಸೇರಿದಂತೆ ಮತ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕಾಡೆಮಿಗಳಿಂದ ಹೊರನಾಡು ಕನ್ನಡಿಗರಿಗೆ ಪ್ರಾಶಸ್ತ್ಯ ಸಿಗಲಿ: ಕನ್ನಡ ಸಂಘಗಳು
ಅವೈಜ್ಞಾನಿಕ ಕಾಮಗಾರಿಗೆ ವಿರೋಧ: ರಸ್ತೆ ತಡೆದು ಪ್ರತಿಭಟನೆ