ಆರೋಗ್ಯಪೂರ್ಣ ಜೀವನಕ್ಕೆ ಯೋಗ ಮದ್ದು: ಎಸ್ಪಿ ಪದ್ಮಿನಿ

KannadaprabhaNewsNetwork |  
Published : Jun 22, 2024, 12:47 AM IST
ಚಾಮರಾಜನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ವಿವಿಧ ಇಲಾಖೆಗಳು ಹಾಗೂ ಸಂಘಸಂಸ್ಥೆಗಳ ಸಹಯೋಗದಲ್ಲಿ ’ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಎಸ್ಪಿ ಪದ್ಮಿನಿ ಸಾಹು ಉದ್ಘಾಟಿಸಿ  ಮಾತನಾಡಿದರು. | Kannada Prabha

ಸಾರಾಂಶ

ದೈಹಿಕ, ಮಾನಸಿಕ ಸುಸ್ಥಿತಿ ಹಾಗೂ ಆರೋಗ್ಯಪೂರ್ಣ ಜೀವನಕ್ಕಾಗಿ ಯೋಗ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಯೋಗವನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು. ಚಾಮರಾಜನಗರದಲ್ಲಿ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆ । ಯೋಗಕ್ಕೆ ವಯಸ್ಸಿನ ಮಿತಿ ಇಲ್ಲ. ಎಲ್ಲರೂ ಪಾಲ್ಗೊಳ್ಳಬಹುದು

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದೈಹಿಕ, ಮಾನಸಿಕ ಸುಸ್ಥಿತಿ ಹಾಗೂ ಆರೋಗ್ಯಪೂರ್ಣ ಜೀವನಕ್ಕಾಗಿ ಯೋಗ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಯೋಗವನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು.

ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ವಿವಿಧ ಇಲಾಖೆಗಳು ಹಾಗೂ ಸಂಘಸಂಸ್ಥೆಗಳ ಸಹಯೋಗದಲ್ಲಿ ’ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಪರಂಪರೆಯಲ್ಲಿ ಯೋಗಕ್ಕೆ ಮಹತ್ವಪೂರ್ಣ ಸ್ಥಾನವಿದೆ. ಯೋಗ ನಮ್ಮ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬರು ಪ್ರತಿದಿನ ಯೋಗದಲ್ಲಿ ತೊಡಗಿಸಿಕೊಳ್ಳುವುದರಿಂದ ಸಾಕಷ್ಟು ರೋಗರುಜಿನಗಳಿಂದ ಪಾರಾಗಬಹುದಾಗಿದೆ. ಯೋಗಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ. ಎಲ್ಲರೂ ಸಹಯೋಗದಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.

ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೇದ, ಜಿಲ್ಲಾ ಆಯುಷ್ ಅಧಿಕಾರಿ ಸುಜಾತ, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎಚ್.ಜಿ. ಕುಮಾರಸ್ವಾಮಿ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ. ಮಾನಸ, ಇತರರು ಕಾರ್ಯಕ್ರಮದಲ್ಲಿ ಇದ್ದರು.

ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನಿಜಗುಣ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಾಗರಿಕರು, ವಿದ್ಯಾರ್ಥಿಗಳು, ಇತರರಿಗೆ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ