ಆರೋಗ್ಯವಂತರಾಗಿ ಬದುಕಲು ಯೋಗಾಭ್ಯಾಸ ಅಗತ್ಯ

KannadaprabhaNewsNetwork |  
Published : Jun 22, 2026, 01:15 AM IST
ಸಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾದ್ಯಂತ ಭಾನುವಾರ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೇಂದ್ರ ಸರ್ಕಾರದ ಆಯುಷ್‌ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಆಚರಿಸಲಾಯಿತು.

ಶಾಸಕ ಎಚ್‌.ಡಿ.ತಮ್ಮಯ್ಯ ಅಭಿಮತ । ಚಿಕ್ಕಮಗಳೂರಿನ ಜಿಲ್ಲಾದ್ಯಂತ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾದ್ಯಂತ ಭಾನುವಾರ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೇಂದ್ರ ಸರ್ಕಾರದ ಆಯುಷ್‌ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಆಚರಿಸಲಾಯಿತು.

ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ. ಆರೋಗ್ಯ ಇಲಾಖೆ, ಆಯುಷ್‌ ಇಲಾಖೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಎಐಟಿ ವೃತ್ತದ ಒಕ್ಕಲಿಗ ಬೆಳ್ಳಿ ಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಚಿಕ್ಕಮಗಳೂರಿನ ಶಾಸಕ ಎಚ್‌.ಡಿ.ತಮ್ಮಯ್ಯ ಉದ್ಘಾಟಿಸಿದರು.

ಶಾಸಕ ಎಚ್‌ಡಿ ತಮ್ಮಯ್ಯ, ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್‌. ಮಹೇಶ್‌, ಚಿಕ್ಕಮಗಳೂರು ಸಿಡಿಎ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಮೊದಲಾದವರು ಯೋಗ ಮಾಡಿದರು.

ನಗರದ ಬ್ರಹ್ಮಾ ಕುಮಾರೀಸ್‌ ಈಶ್ವರೀಯ ವಿಶ್ವ ವಿದ್ಯಾಲಯ, ಪ್ರಬೋಧಿನಿ ಯೋಗ ಶಿಕ್ಷಣ ಟ್ರಸ್ಟ್, ಭಾರತ್‌ ಸ್ವಾಭಿಮಾನ್‌ ಪತಂಜಲಿ ಯೋಗ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ನೂರಾರು ಸಂಖ್ಯೆ ಸಾರ್ವಜನಿಕರು ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.

ಆರೋಗ್ಯವಂತ ಬದುಕಿಗೆ ಯೋಗ: ತಮ್ಮಯ್ಯ

ಯೋಗದಿಂದ ಸಾವನ್ನು ದೂರ ಮಾಡುವುದಕ್ಕೆ ಸಾಧ್ಯವಿಲ್ಲ. ಆದರೆ, ಯೋಗದಿಂದ ಇರುವಷ್ಟು ದಿನ ಆರೋಗ್ಯವಂತರಾಗಿ ಬದುಕುವುದಕ್ಕೆ ಯೋಗ ಮಾಡಬೇಕಾಗಿದೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯತಿಳಿಸಿದರು.

ಭಾರತೀಯ ಪರಂಪರೆಯಲ್ಲಿನ ಯೋಗಾಭ್ಯಾಸ ಇಂದು ವಿಶ್ವದ ಹಲವು ದೇಶಗಳಲ್ಲಿ ಪ್ರಚಲಿತವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡುತ್ತಿರುವುದಕ್ಕೆ ಭಾರತದ ಪ್ರಧಾನ ಮಂತ್ರಿ ಕಾರಣ. ಅವರಿಗೆ ನಾವೆಲ್ಲರೂ ಅಭಿನಂದನೆ ಸಲ್ಲಿಸಬೇಕಿದೆ ಎಂದು ಹೇಳಿದರು.

ಆರೋಗ್ಯದ ಬಗ್ಗೆ 50 ವರ್ಷದ ನಂತರ ಕಾಳಜಿ ಹೆಚ್ಚಾಗಲಿದೆ. ಹಾಗಾಗಿ, ಎಲ್ಲರೂ ಆರೋಗ್ಯವಂತರಾಗಿ ಬದುಕಿಗೆ ಯೋಗ ವನ್ನು ಮೈಗೂಡಿಸಿಕೊಳ್ಳಬೇಕೆಂದರು.

ಇಂದಿನ ಜೀವನ ಶೈಲಿಗೆ ಬೇಕು ಯೋಗ: ಭೋಜೇಗೌಡ

ವಿಧಾನಪರಿಷತ್‌ ಸದಸ್ಯ ಎಸ್‌,ಎಲ್‌.ಭೋಜೇಗೌಡ ಮಾತನಾಡಿ ಯೋಗ ಇಂದಿನ ಜೀವನಶೈಲಿಗೆ ಅನಿವಾರ್ಯ. ಆರೋಗ್ಯ ಇಲ್ಲದೇ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಕೆಲವು ತಮ್ಮ ಕೆಟ್ಟ ಅಭ್ಯಾಸದಿಂದ ಆರೋಗ್ಯ ತಮ್ಮ ಕೈಯ್ಯಾರೆ ಹಾಳು ಮಾಡಿಕೊಳ್ಳುತ್ತಾರೆ. ಜೀವನದಲ್ಲಿ ಶಿಸ್ತು ತುಂಬಾ ಮುಖ್ಯ. ಎಷ್ಟು ದಿನ ಬದುಕುತ್ತೇವೆ ಎಂಬುದು ಮುಖ್ಯವಲ್ಲ. ಬದುಕುವಷ್ಟು ದಿನ ಆರೋಗ್ಯವಂತರಾಗಿ ಬದುಕಬೇಕು. ಆರೋಗ್ಯದಿಂದ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಯೋಗ ದಿನಾಚರಣೆಯಲ್ಲಿ ಪ್ರಬೋದಿನಿ ಯೋಗ ಶಿಕ್ಷಣ ಟ್ರಸ್ಟ್‌ನ ಎಂ.ಆರ್.ನಾಗರಾಜ್‌ ಅವರನ್ನು ಸನ್ಮಾನಿಸಲಾಯಿತು. ನಗರ ಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್‌, ಕಾಫಿಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್‌, ಬ್ರಹ್ಮಾ ಕುಮಾರೀಸ್‌ ಈಶ್ವರೀಯ ವಿಶ್ವ ವಿದ್ಯಾಲಯ ನಿರ್ದೇಶಕರಾದ ಡಾ.ಭಾಗ್ಯಕ್ಕ, ಪ್ರಬೋದಿನಿ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಎಚ್‌.ಸಿ.ಸುರೇಂದ್ರ , ಭಾರತ್‌ ಸ್ವಾಭಿಮಾನ್‌ ಪತಂಜಲಿ ಯೋಗ ಸಮಿತಿಯ ಜಿಲ್ಲಾ ಸಂಚಾಲಯ ಎಸ್‌.ವೈ.ದಿವಾಕರ್‌ ಭಟ್‌, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಜಿಲ್ಲಾ ಆಯುಷ್‌ ಅಧಿಕಾರಿ ಡಾ,ಎಸ್‌.ಗೀತಾ, ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ ಮೊದಲಾದವರಿದ್ದರು.ಫೋಟೋ

ಕೇಂದ್ರ ಸರ್ಕಾರದ ಆಯುಷ್‌ ಸಚಿವಾಲಯ ಜಿಲ್ಲಾಡಳಿತ, ಆಯುಷ್‌ ಇಲಾಖೆ ಸಹಯೋಗದಲ್ಲಿ ಭಾನುವಾರ ಚಿಕ್ಕಮಗಳೂರಿನ ಒಕ್ಕಲಿಗರ ಬೆಳ್ಳಿ ಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಶಾಸಕರಾದ ಎಚ್‌.ಡಿ,ತಮ್ಮಯ್ಯ, ಎಸ್‌,ಎಲ್‌.ಭೋಜೇಗೌಡ,ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ,ಎನ್‌,ಮಹೇಶ್‌, ಚಿಕ್ಕಮಗಳೂರು ಸಿಡಿಎ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಮೊದಲಾದವರು ಯೋಗ ಮಾಡಿದರು.

ಫೋಟೋ

ಚಿಕ್ಕಮಗಳೂರಿನ ಒಕ್ಕಲಿಗರ ಬೆಳ್ಳಿ ಭವನದಲ್ಲಿ ಆಯೋಜಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಶಾಸಕ ಎಚ್‌,ಡಿ,ತಮ್ಮಯ್ಯ ಉದ್ಘಾಟಿಸಿದರು. ಎಸ್‌.ಎಲ್‌.ಭೋಜೇಗೌಡ, ಎ.ಎನ್‌.ಮಹೇಶ್‌, ಮಂಜೇಗೌಡ ಸೇರಿದಂತೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣ ಕೇವಲ ಸರ್ಕಾರಿ ನೌಕರಿಗಾಗಿ ಅಲ್ಲ: ಶಾಸಕ ಎಚ್.ಡಿ.ತಮ್ಮಯ್ಯ
ಮನಸ್ಸು, ದೇಹದ ಆರೋಗ್ಯಕ್ಕೆ ಯೋಗವೇ ಮದ್ದು