ಯೋಗಾಭ್ಯಾಸ ಪ್ರತಿದಿನ ಜೀವನದಲ್ಲಿ ಅಡಕವಾಗಿರಲಿ- ತಹಸೀಲ್ದಾರ್‌

KannadaprabhaNewsNetwork |  
Published : Jun 23, 2025, 12:33 AM IST
ಪೋಟೊ-೨೧ ಎಸ್.ಎಚ್.ಟಿ. ೨ಕೆ- ತಹಸೀಲ್ದಾರ ಅನಿಲ ಬಡಿಗೇರ ಸೇರಿ ಇತರೇ ಅಧಿಕಾರಿಗಳು ಯೋಗಾಭ್ಯಾಸದಲ್ಲಿ ತೊಡಗಿರುವುದು. | Kannada Prabha

ಸಾರಾಂಶ

ತಲೆತಲಾಂತರದಿಂದ ಬಂದಿರುವ ಯೋಗಾಭ್ಯಾಸವನ್ನು ನಿತ್ಯ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ದೇಹ ಮತ್ತು ಮನಸ್ಸಿನ ಆರೋಗ್ಯ ಸುದೀರ್ಘ ಕಾಲದವರೆಗೆ ಕಾಪಾಡಿಕೊಳ್ಳಬಹುದೆಂದು ತಹಸೀಲ್ದಾರ್ ಅನಿಲ ಬಡಿಗೇರ ತಿಳಿಸಿದರು.

ಶಿರಹಟ್ಟಿ: ತಲೆತಲಾಂತರದಿಂದ ಬಂದಿರುವ ಯೋಗಾಭ್ಯಾಸವನ್ನು ನಿತ್ಯ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ದೇಹ ಮತ್ತು ಮನಸ್ಸಿನ ಆರೋಗ್ಯ ಸುದೀರ್ಘ ಕಾಲದವರೆಗೆ ಕಾಪಾಡಿಕೊಳ್ಳಬಹುದೆಂದು ತಹಸೀಲ್ದಾರ್ ಅನಿಲ ಬಡಿಗೇರ ತಿಳಿಸಿದರು. ಶನಿವಾರ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸ್ವಯಂ ಮತ್ತು ಸಮಾಜದ ಒಳಿತಿಗೆ ಯೋಗ ಎಂಬುದು ಬಹಳ ಅವಶ್ಯ. ಅನೇಕ ಋಷಿ ಮುನಿಗಳು, ತಪಸ್ವಿಗಳು, ಧಾರ್ಮಿಕ ಗುರುಗಳು ಯುಗ ಯುಗಾಂತರಗಳಿಂದ ಯೋಗಾಭ್ಯಾಸ ಮಾಡಿ ದೈಹಿತ ಮತ್ತು ಮಾನಸಿಕವಾಗಿ ಪ್ರಯೋಜನ ಪಡೆದಿದ್ದಾರೆ ಎಂದರು. ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಒತ್ತಡಕ್ಕೆ ಒಳಗಾಗಿ ಜೀವನ ನಡೆಸುವಂತಾಗಿದೆ. ಒತ್ತಡ ಮುಕ್ತ ಉತ್ತಮ ಆರೋಗ್ಯಕ್ಕಾಗಿ ಯೋಗ ತುಂಬಾ ಅವಶ್ಯವಾಗಿದೆ. ಭಾರತ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಯೋಗಾಭ್ಯಾಸ ಬೆಳೆದು ಬಂದಿದೆ. ಅದನ್ನು ಈಗ ೨೦೧೪ರಿಂದ ಜೂನ್ ೨೧ರಿಂದ ಪ್ರತಿ ವರ್ಷ ಅಂತಾರಾಷ್ಟ್ರೀಯ ಯೋಗ ದಿನವೆಂದು ಆಚರಿಸುತ್ತ ಬರುತ್ತಿದೆ ಎಂದರು.ಉತ್ತಮ ಜೀವನವನ್ನು ಸಾಗಿಸಲು ಯೋಗದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಕರ ಜೀವನವನ್ನು ಸಾಗಿಸಲು ಸಾಧ್ಯವಾಗುತ್ತದೆ. ದಿನವೂ ಸೂರ್ಯ ನಮಸ್ಕಾರ ಮಾಡುವುದರಿಂದ ನಮ್ಮ ದೇಹ ಮತ್ತು ಮನಸ್ಸು ಸ್ಥಿಮಿತದಲ್ಲಿರುತ್ತದೆ. ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರು ಯೋಗಾಭ್ಯಾಸ ಮಾಡಬೇಕು ಎಂದರು. ಸಂಪತ್ತಿಗಿಂತ ಆರೋಗ್ಯ ಅತ್ಯಮೂಲ್ಯವಾಗಿರುವುದರಿಂದ ಪ್ರತಿಯೊಬ್ಬರೂ ತಪ್ಪದೇ ಯೋಗ ಮಾಡುವ ಮೂಲಕ ಶರೀರ ಮತ್ತು ಮನಸ್ಸನ್ನು ಸದೃಢವಾಗಿಟ್ಟುಕೊಳ್ಳಬಹುದು. ಹಿಂದಿನ ಕಾಲದಲ್ಲಿ ಎಲ್ಲರೂ ದೈಹಿಕವಾಗಿ ಶ್ರಮ ಪಡುತ್ತಿದ್ದರು. ಆಧುನಿಕ ಯುಗದಲ್ಲಿ ಭೋಗದ ಜೀವನಕ್ಕೆ ಮಾರುಹೋಗುತ್ತಿರುವುದರಿಂದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ದಿನಕ್ಕೆ ಒಂದು ಗಂಟೆಯಾದರೂ ಯೋಗ ಮಾಡುವ ಅಭ್ಯಾಸ ಮೈಗೂಡಿಸಕೊಳ್ಳಬೇಕು. ಇದರಿಂದ ಸದಾ ಲವಲವಿಕೆಯಿಂದಿರಬಹುದು ಎಂದು ಹೇಳಿದರು.ಹಿಂದಿನ ಕಾಲದಲ್ಲಿ ಕೊಟ್ಟಿಗೆ ಗೊಬ್ಬರ ಬಳಸಿ ಬೆಳೆ ಬೆಳೆಯುತ್ತಿದ್ದರಿಂದ ಪ್ರತಿಯೊಬ್ಬರಿಗೂ ಪೌಷ್ಟಿಕಾಂಶವುಳ್ಳ ಆಹಾರ ಸಿಗುತ್ತಿತ್ತು. ಕಾಲ ಬದಲಾದಂತೆಲ್ಲ ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಬಳಸಿ ಬೆಳೆಯುವ ಆಹಾರದಿಂದ ಸತ್ವವಿಲ್ಲದಂತಾಗಿ ನಾನಾ ರೀತಿಯ ರೋಗಗಳು ಮನುಷ್ಯನನ್ನು ಕಾಡುತ್ತಿದೆ. ಇದಕ್ಕೆಲ್ಲ ಪರಿಹಾರವೆಂದರೆ ಪ್ರತಿಯೊಬ್ಬರೂ ಯೋಗಕ್ಕೆ ಮೊರೆ ಹೋಗಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯಕ ಮಾತನಾಡಿ, ಅನಾದಿ ಕಾಲದಿಂದಲೂ ಒಂದಲ್ಲ ಒಂದು ರೀತಿಯ ರೋಗ ಮನುಕುಲಕ್ಕೆ ಕಾಟ ಕೊಡುತ್ತಿದೆ. ದೇಹವನ್ನು ದಂಡಿಸಿ ಯಾರು ಬದುಕುತ್ತಾರೋ ಅಂತಹವರು ಮಾತ್ರ ರೋಗವನ್ನು ಹಿಮ್ಮೆಟ್ಟಿಸಲು ಸಾಧ್ಯ. ಮನುಷ್ಯನಿಗೆ ಆರೋಗ್ಯವೇ ಮಹಾಭಾಗ್ಯ. ಯೋಗಾಸನದಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ದೀರ್ಘಾರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡುವ ಮೂಲಕ ಪ್ರಪಂಚದಲ್ಲಿಯೇ ವಿಶಿಷ್ಟ ದೇಶವನ್ನಾಗಿ ಮಾಡುವ ಗುರಿ ನಮ್ಮದಾಗಬೇಕು. ಭಾರತವೂ ಸೇರಿದಂತೆ ಸುಮಾರು ೧೮೦ ದೇಶಗಳಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುವುದು. ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಯೋಗಾಭ್ಯಾಸದಲ್ಲಿ ತೊಡಗಿಕೊಂಡರೆ ಏಕಾಗ್ರತೆ ತಂದುಕೊಂಡು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ. ಎಲ್ಲ ಇಲಾಖೆ ಅಧಿಕಾರಿಗಳು ಸೇರಿದಂತೆ ಶಾಲೆಯ ಮಕ್ಕಳು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ