ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತಿನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಬಹುದು ಎಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧಿಕಾರಿ, ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಮಟ್ಟದ ಯೋಗಪಟು ಎ.ಬಿ.ಲಲಿತ ಅಭಿಪ್ರಾಯ ಪಟ್ಟರು.
ವಿರಾಜಪೇಟೆ: ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತಿನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಬಹುದು ಎಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧಿಕಾರಿ, ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಮಟ್ಟದ ಯೋಗಪಟು ಎ.ಬಿ.ಲಲಿತ ಅಭಿಪ್ರಾಯ ಪಟ್ಟರು.ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಸದೃಢತೆಯ ಹಿನ್ನಲೆಯಲ್ಲಿ ಯೋಗವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ ಎಂದರು.
ಕೇವಲ ದೈಹಿಕ ಕಸರತ್ತು ಅಲ್ಲ: ಪ್ರತಿನಿತ್ಯದ 24 ಗಂಟೆಗಳಲ್ಲಿ 1 ಗಂಟೆಯನ್ನು ನಮ್ಮ ದೇಹದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಯೋಗಕ್ಕೆ ಮೀಸಲಿಡಬೇಕು. ಯೋಗವೆಂದರೆ ಕೇವಲ ದೈಹಿಕ ಕಸರತ್ತಲ್ಲ. ಬದಲಿಗೆ ದೇಹ , ಮನಸ್ಸು, ಉಸಿರು ಮೂರರ ಸಂಗಮ. ಪ್ರತಿನಿತ್ಯ ಯೋಗ ಮಾಡುವುದರಿಂದ ಶಾರೀರಕ, ಮಾನಸಿಕ, ಬೌದ್ದಿಕ ಹಾಗೂ ಆಧ್ಯಾತ್ಮಿಕವಾಗಿ ನಮ್ಮ ವ್ಯಕ್ತಿತ್ವವು ವಿಕಸನವಾಗುತ್ತದೆ ಎಂದರು.
ಪ್ರಾಂಶುಪಾಲೆ ಡಾ.ಕೆ.ಜಿ . ವೀಣಾ ಯೋಗದ ಮಹತ್ವವೇನು ಎಂಬುದನ್ನು ಇಂದು ಜಗತ್ತೆ ಅರಿತಿದೆ. ಯೋಗ ಕೇವಲ ದೈಹಿಕವಾಗಿ ಮಾತ್ರವಲ್ಲ ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡುದರಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದರು.ವಿರಾಜಪೇಟೆ ಕಾವೇರಿ ಯೋಗ ಕೇಂದ್ರದ ತರಬೇತುದಾರರಾದ ಸೀತಾರಾಂ ರೈ ರವರ ಮಾರ್ಗದರ್ಶನದಲ್ಲಿ ಯೋಗ ಪಟುಗಳಾದ ಎ.ಬಿ. ಲಲಿತಾ, ರತಿ ಕಲಾ,ರವಿ ಕಲಾ, ಶೀಲಾ, ಲಿಲ್ಲಿ , ಸೌಜಿತ್ , ರಾಗಿಣಿ, ಶಾಂತಲ ಚಂದ್ರ ರವರು ವೇದಿಕೆಯ ಮೇಲೆ ವಿವಿಧ ಯೋಗ ಆಸನ , ಧ್ಯಾನ , ಪ್ರಾಣಾಯಾಮ , ಸೂರ್ಯ ನಮಸ್ಕಾರವನ್ನು ಪ್ರದರ್ಶಿಸಿ ಕಾಲೇಜು ವಿದ್ಯಾರ್ಥಿಗಳಿಂದಲು ಕ್ರಮಬದ್ದವಾಗಿ ಮಾಡಿಸಿದರು. ಈ ಸಂದರ್ಭದಲ್ಲಿ ಎನ್.ಸಿ.ಸಿ ಅಧಿಕಾರಿ ಲೆ.ಬಿ.ಬಿ. ಬೋಜಮ್ಮ , ಎನ್.ಎಸ್.ಎಸ್ ಅಧಿಕಾರಿ ಬಿ.ಬಿ. ಸುನಿಲ್ ಕುಮಾರ್ , ದೈಹಿಕ ನಿರ್ದೇಶಕ ತಮ್ಮಯ್ಯ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.