ಚನ್ನಪಟ್ಟಣ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಪ್ರತ್ಯೇಕವಾಗಿ ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.
ಶಾಸಕ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ನಗರದ ೫ನೇ ಅಡ್ಡರಸ್ತೆಯಲ್ಲಿರುವ ಶಾಸಕರ ಗೃಹಕಚೇರಿ, ಮಳೂರು, ಬೇವೂರು, ಹೊಂಗನೂರು, ಕೋಡಂಬಳ್ಳಿ, ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಗಣೇಶಮೂರ್ತಿಗಳನ್ನು ವಿತರಿಸಿದರು.
ತಾಲೂಕಿನ ಡೊಡ್ಡಮಳೂರು ಗ್ರಾಮದಲ್ಲಿನ ಸಾಯಿಮಂದಿರದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಉಚಿತವಾಗಿ ಸುಮಾರು ೫೦೦ಕ್ಕೂ ಹೆಚ್ಚು ಗಣೇಶಮೂರ್ತಿಗಳನ್ನು ವಿತರಿಸಲಾಗಿದೆ. ಕಳೆದ ೧೬ ವರ್ಷಗಳಿಂದ ಚನ್ನಮ್ಮ ಚಾರಿಟಬಲ್ ಟ್ರಸ್ಟ್‌ನಿಂದ ತಾಲೂಕಿನಲ್ಲಿ ಗಣೇಶಮೂರ್ತಿಗಳನ್ನು ವಿತರಿಸಿಕೊಂಡು ಬರುತ್ತಿದ್ದು, ಅದರಂತೆ ಈ ಬಾರಿಯೂ ವಿತರಿಸಲಾಗಿದೆ ಎಂದು ತಿಳಿಸಿದರು.
ಈ ವೇಳೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು, ಡಿಎಂಕೆ ಕುಮಾರ್ ಇತರರಿದ್ದರು.
ಚನ್ನಪಟ್ಟಣ ತಾಲೂಕಿನ ಹೊಂಗನೂರು ಜಿಪಂ ವ್ಯಾಪ್ತಿಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಶಾಸಕರ ಗೃಹಕಚೇರಿ, ಮಳೂರು, ಬೇವೂರು, ಹೊಂಗನೂರು, ಕೋಡಂಬಳ್ಳಿ, ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಗಣೇಶಮೂರ್ತಿಗಳನ್ನು ವಿತರಿಸಿದರು.
ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಗಣೇಶ ಮೂರ್ತಿ ವಿತರಿಸಿದರು. ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.