ಅಸಂಸ್ಕೃತಿಯ ಕೊಳಕು ತೊಳೆದ ಯೋಗಿ: ಶಾಸಕ ಡಾ.ಶಿವರಾಜ್ ಪಾಟೀಲ್

KannadaprabhaNewsNetwork |  
Published : Feb 02, 2024, 01:00 AM IST
01ಕೆಪಿಆರ್‌ಸಿಆರ್‌05 | Kannada Prabha

ಸಾರಾಂಶ

ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ನಗರಸಭೆ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ತಮ್ಮ ಕಾಯಕದ ಮೂಲಕ ಸಮಾಜದಲ್ಲಿರುವ ಅಧರ್ಮ, ಅಸಂಸ್ಕೃತಿಯ ಕೊಳಕನ್ನು ಹೋಗಲಾಡಿಸಿದ ಕಾಯಕ ಯೋಗಿಯಾಗಿದ್ದವರು ಮಡಿವಾಳ ಮಾಚಿ ದೇವರು ಅಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮಕ್ಕಳಲ್ಲಿ ತುಂಬುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದರು.

ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು. ಸಮಾಜದಲ್ಲಿ ಮಕ್ಕಳಿಗೆ ಶಿಕ್ಷಣವೆಂಬುವುದು ಅತ್ಯಂತ ಮುಖ್ಯವಾದದ್ದು, ಮಕ್ಕಳು ಶೈಕ್ಷಣಿಕವಾಗಿ ಮುಂದುವರೆದರೆ ಸಮಾಜವು ಮುಂದುವರೆಯಲು ಹಾಗೂ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಆದ್ದರಿಂದ ಸಮಾಜದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅತ್ಯವಶ್ಯಕವೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಾಚಿದೇವ ಯೋಗ ಮಂದಿರದ ಬಸವರಾಜೇಂದ್ರ ಶರಣರು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಮಡಿವಾಳ ಸಮಾಜದ ಮುಖಂಡರು,ಮಹಿಳೆಯರು, ಯುವಕರು ಇದ್ದರು.ಮಾಚಿದೇವರ ಭಾವಚಿತ್ರ ಮೆರವಣಿಗೆ

ಜಯಂತಿ ನಿಮಿತ್ತ ನಗರದ ಮಡಿವಾಳ ಮಾಚಿದೇವ ವೃತ್ತದಿಂದ ವಿವಿಧ ಕಲಾತಂಡಗಳೊಂದಿಗೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಿಂದ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಮಡಿವಾಳ ಮಾಚಿದೇವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಿಲ್ಲೆ ಬೃಹ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ನಗರ ಶಾಸಕ ಡಾ.ಶಿವರಾಜ ಪಾಟೀಲ್, ಸಮಾಜದ ಎನ್.ಶಂಕ್ರಪ್ಪ, ರವಿ ಬೋಸ ರಾಜು, ಶಾಲಂ, ರವೀಂದ್ರ ಜಲ್ದಾರ, ನರಸಿಂಹಲು ಮಾಡಗಿರಿ, ಜಿ.ಶಿವಮೂರ್ತಿ, ಟಿ.ಮಲ್ಲೇಶ, ಜಿ.ಸುರೇಶ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ