ನಿಮ್ಮ ಏಳಿಗೆಗೆ ನೀವೇ ಶಿಲ್ಪಿಗಳು: ಡಿಡಿಪಿಐ ಸ್ವಾಮಿ

KannadaprabhaNewsNetwork |  
Published : Nov 01, 2025, 01:45 AM IST
ಪೊಟೋ೩೧ಸಿಪಿಟಿ೧: ತಾಲೂಕಿನ ಮತ್ತಿಕೆರೆ ಸರ್ಕಾರಿ ಆದರ್ಶ ಪ್ರೌಢಶಾಲೆಯಲ್ಲಿ  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರೇರಣಾ ಕಾರ್ಯಾಗಾರದಲ್ಲಿ ಡಿಡಿಪಿಐ ಸ್ವಾಮಿ ಪಾಠ ಮಾಡಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ವಿದ್ಯಾರ್ಥಿಗಳು ನಿಮ್ಮೊಳಗಿನ ಶಕ್ತಿಯನ್ನು ಅರಿತು ಶ್ರಮದಿಂದ ಅಧ್ಯಯನ ಮಾಡಿದರೆ ಯಶಸ್ಸು ಖಚಿತ. ಪ್ರತಿದಿನ ನಿಗದಿತ ಸಮಯದಲ್ಲಿ ಓದುವ ಅಭ್ಯಾಸ ಬೆಳೆಸಿಕೊಂಡರೆ ಯಾವುದೇ ಗುರಿಯನ್ನೂ ಮುಟ್ಟಬಹುದು ಎಂದು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸ್ವಾಮಿ ತಿಳಿಸಿದರು.

ಚನ್ನಪಟ್ಟಣ: ವಿದ್ಯಾರ್ಥಿಗಳು ನಿಮ್ಮೊಳಗಿನ ಶಕ್ತಿಯನ್ನು ಅರಿತು ಶ್ರಮದಿಂದ ಅಧ್ಯಯನ ಮಾಡಿದರೆ ಯಶಸ್ಸು ಖಚಿತ. ಪ್ರತಿದಿನ ನಿಗದಿತ ಸಮಯದಲ್ಲಿ ಓದುವ ಅಭ್ಯಾಸ ಬೆಳೆಸಿಕೊಂಡರೆ ಯಾವುದೇ ಗುರಿಯನ್ನೂ ಮುಟ್ಟಬಹುದು ಎಂದು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸ್ವಾಮಿ ತಿಳಿಸಿದರು.

ತಾಲೂಕಿನ ಮತ್ತಿಕೆರೆ ಸರ್ಕಾರಿ ಆದರ್ಶ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರೇರಣಾ ಕಾರ್ಯಾಗಾರದಲ್ಲಿ ಪಾಠ ಬೋಧಿಸಿ, ನಿಮ್ಮ ಏಳಿಗೆಗೆ ನೀವೇ ಶಿಲ್ಪಿಗಳು ಎಂಬ ಶೀರ್ಷಿಕೆಯಡಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಿದರು.

ನಿಮ್ಮ ಮೇಲೆ ನೀವು ನಂಬಿಕೆ ಇಡಿ, ಬಡತನ ಸಾಧನೆಗೆ ಅಡ್ಡಿಯಲ್ಲ. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದ ಅವರು, ಆತ್ಮವಿಶ್ವಾಸ ಮತ್ತು ಶ್ರಮದ ಮಹತ್ವವನ್ನು ಸುಮಾರು ೨ ಗಂಟೆಗಳ ಕಾಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿದ ಉಪನಿರ್ದೇಶಕರು ಹಲವು ಸಾಧಕರ ನಿದರ್ಶನಗಳನ್ನು ಉದಾಹರಣೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಚೈತನ್ಯ ತುಂಬಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಅಗತ್ಯ ತಂತ್ರಗಳು ಹಾಗೂ ಸಮಯ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಿ.ವಿ.ಜಯಣ್ಣ, ಶಿಕ್ಷಕರಾದ ಜಗದೀಶ್, ಅನಿಲ್ ಕುಮಾರ್, ಶ್ರೀನಿಧಿ, ದೀಪಿಕಾ,ಅಶ್ವಿನಿ, ನವೀನ, ಭ್ರಮರಾಂಭ, ವಾಣಿಶ್ರೀ, ರಾಜೇಶ್ವರಿ, ಪುಷ್ಪ ನಾಯಕ್ , ಸೂರಜ್ ಪೃಥ್ವಿ, ಸತೀಶ, ಗುರುಮಲ್ಲಯ್ಯ, ರಮೇಶ್ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೊಟೋ೩೧ಸಿಪಿಟಿ೧:

ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಸರ್ಕಾರಿ ಆದರ್ಶ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರೇರಣಾ ಕಾರ್ಯಾಗಾರದಲ್ಲಿ ಡಿಡಿಪಿಐ ಸ್ವಾಮಿ ಪಾಠ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ