ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ವಿವೇಕಾನಂದ ಕಾಲೇಜು ಸಭಾಂಗಣದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಾಲೇಜು ಆಡಳಿತ ಮಂಡಳಿ ಸಹಯೋಗದೊಂದಿಗೆ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ನಡೆದ ಪರಿಸರ ಮತ್ತು ಮಾಧ್ಯಮ ವಿಷಯಗಳ ಬಗ್ಗೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮೊಬೈಲ್ನಲ್ಲಿ ಮುಳುಗಿರುವ ಯುವ ಪೀಳಿಗೆ ಓದುವ ಹವ್ಯಾಸವನ್ನು ಮರೆತಂತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ ಎಂದರು.ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್, ವಿದ್ಯಾರ್ಥಿಗಳು ದಿನನಿತ್ಯದ ಆಗುಹೋಗುಗಳ ಬಗ್ಗೆ ಅರಿವು ಪಡೆಯಬೇಕು. ಪತ್ರಿಕೆಯನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಈ ಮೂಲಕ ಸಾಮಾನ್ಯ ಜ್ಞಾನ ಗಳಿಸಲು ಸಾಧ್ಯ ಎಂದರಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ಹೊಂದಬೇಕು ಎಂದರು. ಕಾಲೇಜಿನ ಪಿ ಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮಾನ್ಯ ಪರಿಸರ ಸಂರಕ್ಷಣೆಯ ಬಗ್ಗೆ ಮತ್ತು ಎಂಜಿಎಂ ಪದವಿ ಕಾಲೇಜಿನ ವಿದ್ಯಾರ್ಥಿನಿ ಖುಷಿ ಅವರು ಮಾಧ್ಯಮ ಹಾಗೂ ಸಮಾಜ ಎಂಬ ವಿಷಯ ಮಂಡಿಸಿದರು.
ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ನಿರ್ದೇಶಕರಾದ ಟಿ ಆರ್ ಪ್ರಭುದೇವ್ ಅವರು ಮಾತನಾಡಿದರು.ಕಳೆದ ಸಾಲಿನ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಬಿ ಎಸ್ ತನುಷ ಪೋಷಕರನ್ನು ಮತ್ತು ವಾಣಿಜ್ಯ ವಿಭಾಗದಲ್ಲಿ ಹೆಚ್ಚಿನ ಅಂಕ ಗಳಿಸಿದ ಎಂ ವೈ ನಿಹಾರಿಕ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪರಿಸರ ಮತ್ತು ಮಾಧ್ಯಮ ಬಗ್ಗೆ ಸಂವಾದ ನಡೆಸಲಾಯಿತು. ಖಜಾಂಚಿ ಕುಡೆಕಲ್ ಗಣೇಶ್, ಜಿಲ್ಲಾ ನಿರ್ದೇಶಕರಾದ ಸಂಶುದ್ದೀನ್, ಸಂಘದ ನಿರ್ದೇಶಕರಾದ ವಿನೋದ್ ಮಹಮ್ಮದ್ ಮುಸ್ತಾಫಾ, ಸದಸ್ಯರಾದ ಜಯಪ್ರಕಾಶ್, ಚೈತನ್ಯ ಇದ್ದರು.
ಕಾಲೇಜು ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಕಾರ್ಯಕ್ರಮ ಸಂಚಾಲಕರಾದ ಕೆ ಕೆ ನಾಗರಾಜ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಸ್ವಾಗತಿಸಿದರು. ಸಂಘದ ನಿರ್ದೇಶಕರಾದ ಕೆ ಜೆ ಶಿವರಾಜ್ ವಂದಿಸಿದರು.