ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀವು ನೀಡಿ

KannadaprabhaNewsNetwork |  
Published : Dec 04, 2025, 01:05 AM IST
ಪೋಟೋ, 3ಎಚ್‌ಎಸ್‌ಡಿ1: ಹೊಸದುರ್ಗ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ  1.42ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಶಾಸಕ ಬಿಜಿ ಗೋವಿಂದಪ್ಪ  ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಹೊಸದುರ್ಗ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 1.42 ಕೋಟಿ ರು.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಕಾಲೇಜಿಗೆ ಸರ್ಕಾರದ ಸವಲತ್ತುಗಳನ್ನು ಕೊಡಲು ಸಿದ್ದನಿದ್ದೇನೆ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ 1.42 ಕೋಟಿ ರು.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಉನ್ನತ ಶಿಕ್ಷಣ ಸಚಿವಾಲಯದ ಯೋಜನೆಗಳಲ್ಲಿ ಕಾಲೇಜುಗಳಲ್ಲಿ ಶೌಚಾಲಯಕ್ಕೆ ಅವಕಾಶವೇ ಇಲ್ಲ ಮುಖ್ಯಮಂತ್ರಿ ಹೇಳಿ ಅವಕಾಶ ಕೊಡಿಸಿ ಎಂದು ಉನ್ನತ ಶಿಕ್ಷಣ ಸಚಿವರೇ ಅಸಾಹಯಕತೆ ತೋಡಿಕೊಂಡಿದ್ದರು. ಆದರೂ ನಮ್ಮ ಮನವಿಗೆ ಸ್ಪಂದಿಸಿ ಬೇರೆ ಮೂಲಗಳಿಂದ ಈ ಕಾಲೇಜಿಗೆ ಸುಸಜ್ಜಿತ ಶೌಚಾಲಯಗಳನ್ನು ನಿರ್ಮಿಸಲು ಅನುದಾನವನ್ನು ನೀಡಿದ್ದಾರೆ. ಈ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಯ ಮೂಲಕ 9 ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಪ್ರಥಮ ದರ್ಜೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ವಯಸ್ಕರಾಗಿದ್ದು ಪ್ರಬುದ್ಧರಾಗಿರುತ್ತಾರೆ ಈ ನಿಟ್ಟಿನಲ್ಲಿ ಅವರಿಗೆ ಅನುಕೂಲಕರವಾದ ರೀತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರು ನಿತ್ಯಾ ಕಾಲೇಜಿಗೆ ಬೇಟಿ ನೀಡುವ ಮೂಲಕ ಕಾಮಗಾರಿಯ ಗುಣಮಟ್ಟವನ್ನು ವೀಕ್ಷಣೆ ಮಾಡುವುದರ ಜೊತೆಗೆ ಕಾಲೇಜಿನಲ್ಲಿ ನಡೆಯುವ ಪಠ್ಯ , ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಗಮನ ನೀಡುವಂತೆ ತಿಳಿಸಿದರು.

ಈ ವೇಳೆ ಅಭಿವೃದ್ದಿ ಸಮಿತಿ ಸದಸ್ಯರಾದ ಎಚ್‌ ಬಿ ಸತೀಶ್‌, ದೀಪಿಕಾ ಸತೀಶ್‌, ಟಿಎಚ್‌ ಬಸವರಾಜ್‌, ಕೆ ಟಿ ಮಂಜುನಾಥ್‌, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್‌, ಆಗ್ರೋ ಶಿವಣ್ಣ, ಪ್ರಾಂಶುಪಾಲ ಅಶ್ವತ್‌ ಯಾದವ್ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಎಸ್ ಸಮಾವೇಶ ಪಕ್ಷದ ಕಾರ್ಯಕರ್ತರ ಸಭೆ ಮಾತ್ರ
ಹೊನ್ನವಳ್ಳಿಯಲ್ಲಿ ದಾನಶೂರ ಕರ್ಣ ನಾಟಕ ಪ್ರದರ್ಶನ