ಯುವ ಕಾರ್ಯಕರ್ತರು ನಾಯಕತ್ವ ಗುಣ ಬೆಳೆಸಿಕೊಳ್ಳಿ

KannadaprabhaNewsNetwork |  
Published : Apr 11, 2026, 04:00 AM IST
ಮೋಹಿತೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಗೋಕಾಕ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವು ಸದೃಢವಾಗಿ ಬೆಳೆಯಲು ಶಾಸಕ ರಮೇಶ ಜಾರಕಿಹೊಳಿ ಅವರ ಪ್ರೇರಣೆ ಹಾಗೂ ಸಹಕಾರ ಮುಖ್ಯವಾಗಿದೆ ಎಂದು ಜಿಲ್ಲಾ ಪ್ರಶಿಕ್ಷಣ ಸಂಯೋಜಕರು ಮತ್ತು ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಮಹೇಶ ಮೋಹಿತೆ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವು ಸದೃಢವಾಗಿ ಬೆಳೆಯಲು ಶಾಸಕ ರಮೇಶ ಜಾರಕಿಹೊಳಿ ಅವರ ಪ್ರೇರಣೆ ಹಾಗೂ ಸಹಕಾರ ಮುಖ್ಯವಾಗಿದೆ ಎಂದು ಜಿಲ್ಲಾ ಪ್ರಶಿಕ್ಷಣ ಸಂಯೋಜಕರು ಮತ್ತು ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಮಹೇಶ ಮೋಹಿತೆ ಹೇಳಿದರು.

ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಶುಕ್ರವಾರ ಜರುಗಿದ ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲ ಮಟ್ಟದ ಪ್ರಶಿಕ್ಷಣ ಮಹಾಭಿಯಾನ-2026ರ ಬೆಳಗಾವಿ ಗ್ರಾಮಾಂತರ ಜಿಲ್ಲೆ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಭಾರತೀಯ ಜನತಾ ಪಕ್ಷವು ನೀಡಿದ ಜವಾಬ್ದಾರಿಯನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡಬೇಕು. ಪಕ್ಷ ಸಂಘಟನೆಗೆ ಈ ಭಾಗದ ಶಾಸಕರಾದ ರಮೇಶ ಜಾರಕಿಹೊಳಿ ಪ್ರಯತ್ನ ಮಹತ್ತರವಾಗಿದೆ. ಗೋಕಾಕ ಮತ ಕ್ಷೇತ್ರದಲ್ಲಿ ಪ್ರಶಿಕ್ಷಣ ಮಹಾಭಿಯಾನವು ಯಶಸ್ವಿಗೆ ಕಾರಣಿಕರ್ತರಾಗಿದ್ದಾರೆ. ಅವರು ಈ ಭಾಗದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಪ್ರಶಿಕ್ಷಣಾರ್ಥಿಗಳಿಗೆ ಎಲ್ಲ ರೀತಿಯ ವ್ಯವಸ್ಥೆ ಹಾಗೂ ಬಿಜೆಪಿ ಪಕ್ಷದ ಸಂಪೂರ್ಣ ಮಾಹಿತಿಯನ್ನು ನೀಡುವುದರ ಮುಖಾಂತರ ಕಳೆದ ಐದು ದಿನಗಳಿಂದ ಅಚ್ಚುಕಟ್ಟಾಗಿ ಪ್ರಶಿಕ್ಷಣ ವರ್ಗವನ್ನು ನಿಭಾಯಿಸಿ, ಭಾಜಪ ಪಕ್ಷವು ನಡೆದು ಬಂದ ದಾರಿಯನ್ನು ಮತ್ತು ಪಕ್ಷ ಸಂಘಟನೆಗೆ ದುಡಿದ ಮಹಾನಾಯಕರ ನಾಯಕತ್ವ ಗುಣಗಳನ್ನು ಇಂದಿನ ಯುವ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸ್ ಗೌಡರ, ಸುರೇಶ ಸನದಿ, ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಜಿಲ್ಲಾ ಓಬಿಸಿ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ನೀತಿನ ಚೌಗಲೆ, ಜಿಲ್ಲಾ ಮಾಧ್ಯಮ ಪ್ರಮುಖ ಸಚೀನ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಬಿಜೆಪಿ ಹಿರಿಯ ಮುಖಂಡ ಪ್ರಮೋದ್ ಜೋಶಿ, ಕಾರ್ಯದರ್ಶಿ ಶಿವಾನಂದ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜೇರಿ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅನೇಕರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಒಡೆಯರ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ
ತ್ಯಾಜ್ಯ ವಿಲೇವಾರಿ ಘಟಕ ತೆರವಿಗೆ ಆಗ್ರಹ