ಕನ್ನಡಪ್ರಭ ವಾರ್ತೆ ಶಿವಮೊಗ್ಗ / ಭದ್ರಾವತಿ / ಸಾಗರ
ಶಿವಮೊಗ್ಗ ತಾಲೂಕು ಮಂಡೇನಕೊಪ್ಪದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಎಲ್ಲ ಕ್ಷೇತ್ರದಲ್ಲೂ ಅನೇಕರು, ನನ್ನ ಮುಖ ನೋಡದವರು ನನ್ನ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. 2 ಸಾವಿರಕ್ಕೂ ಹೆಚ್ಚು ಹಳ್ಳಿಯಲ್ಲಿರುವ ಯುವ ಶಕ್ತಿ ಇದೆ. ರೈತ ಶಕ್ತಿ, ಮಹಿಳಾ ಶಕ್ತಿಗಳು, ಬಡವರು ಈ ಬಾರಿ ಈಶ್ವರಪ್ಪರನ್ನು ಗೆಲ್ಲಿಸುತ್ತೇವೆ ಎಂದು ಮುಂದೆ ಬಂದಿದ್ದಾರೆ. ಇವರೆಲ್ಲರ ಋಣವನ್ನು ನಾನು ಯಾವ ರೀತಿ ತೀರಿಸಬೇಕೋ ನನಗೆ ಗೊತ್ತಾಗುತ್ತಿಲ್ಲ ಎಂದರು.
ಸಕ್ಕರೆ ಕಾರ್ಖಾನೆ ರೈತರನ್ನು ಒಕ್ಕಲೆಬ್ಬಿಸಲು ನಾನು ಬಿಡಲ್ಲ:ನಾನು ಶಾಸಕರಾಗಿನಿಂದಲೂ ಸಕ್ಕರೆ ಕಾರ್ಖಾನೆ ಜಾಗದಲ್ಲಿ ರೈತರು ಸಾಗವಳಿ ಮಾಡಿಕೊಂಡಿಕೊಂಡು ಬಂದಿದ್ದೀರಿ, ನಿಮ್ಮನ್ನು ಆಗಲೂ ಒಕ್ಕಲೆಬ್ಬಿಸಲು ಬಿಟ್ಟಿಲ್ಲ. ಈಗಲೂ ಬಿಡಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಭದ್ರಾವತಿಯಲ್ಲಿ ವಿಐಎಸ್‌ಎಲ್ ಸಮಸ್ಯೆ, ಶಿವಮೊಗ್ಗ ಗ್ರಾಮಾಂತರ, ಸಾಗರ, ಶಿಕಾರಿಪುರದಲ್ಲಿ ಬಗರ್‌ಹುಕುಂ ಸಮಸ್ಯೆ ಇದೆ. ಈ ಸಮಸ್ಯೆಗಳು ಬಗೆಹರಿಸಬೇಕಾದರೆ ಈಶ್ವರಪ್ಪ ಎಂಪಿ ಆಗಬೇಕು ಎಂದು ಜನರೇ ಏಳುತ್ತಿದ್ದಾರೆ. ಹೀಗಾಗಿ ನನ್ನ ಗೆಲುವು ಖಚಿತ ಎಂದು ತಿಳಿಸಿದರು.
ನನಗೆ ಮೂರೂ ಪಕ್ಷದ ಅದೃಶ್ಯ ಮತದಾರರ ಬಲವಿದೆ ಈಶ್ವರಪ್ಪ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಎರಡೂ ಪಕ್ಷದವರೂ ನನ್ನ ಬೆಂಬಲಕ್ಕೆ ಪರೋಕ್ಷವಾಗಿ ನಿಂತಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎನ್ನುವ ಭರವಸೆ ನೀಡಿದ್ದಾರೆ. ಕಾಂಗ್ರೇಸ್‍ನಲ್ಲಿಯೂ ಒಂದು ಬಣ ನನ್ನನ್ನು ಬೆಂಬಲಿಸುತ್ತಿದೆ. ಮುಖ್ಯವಾಗಿ ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ. ಸಹಜವಾಗಿ ಒಕ್ಕಲಿಗ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಂಡಿದ್ದಾರೆ. ಒಕ್ಕಲಿಗ ಸಮುದಾಯ ನನ್ನ ಕೈಹಿಡಿಯಲಿದ್ದಾರೆ ಎಂದು ಹೇಳಿದರು.ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಓಡಾಡಿದ್ದೇನೆ. ಅನೇಕ ಭಾಗಗಳಲ್ಲಿ ನನಗೆ ಪರಿಚಯವೇ ಇಲ್ಲ. ಆದರೂ ನನ್ನ ಬಳಿ ತಂಡೋಪತಂಡವಾಗಿ ಬಂದು ಬೆಂಬಲ ಸೂಚಿಸುತ್ತಿರುವುದು ಸಂತೋಷ ತಂದಿದೆ. ಹಾಗಾಗಿ ಈ ಚುನಾವಣೆಯಲ್ಲಿ ಅದೃಶ್ಯ ಮತದಾರರು ನನ್ನ ಕೈಹಿಡಿಯಲಿದ್ದು, ಗೆಲುವು ನಿಶ್ಚಿತ. ಮತದಾರರ ನಿರೀಕ್ಷೆಯೂ ನನ್ನ ಗೆಲುವೇ ಆಗಿದೆ. ಎರಡನೇ ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೇಸ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಹೇಳಿದರು.
ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್, ನಗರಸಭೆ ಮಾಜಿ ಅಧ್ಯಕ್ಷ ಎಸ್.ವಿ.ಕೃಷ್ಣಮೂರ್ತಿ, ನಗರಸಭೆ ಮಾಜಿ ಸದಸ್ಯರಾದ ಎಸ್.ಎಲ್.ಮಂಜುನಾಥ್, ಕಸ್ತೂರಿ ಇನ್ನಿತರರು ಹಾಜರಿದ್ದರು.ತಮಿಳು ಸಮುದಾಯದ ಬೆಂಬಲ: ತಮಿಳು ಸಮಾಜದ ಎಲ್ಲಾ ಸಮುದಾಯಗಳಿಗೆ ವೈಯುಕ್ತಿಕ ಹಾಗೂ ಸರ್ಕಾರದ ನೆರವು ಕೊಡಿಸಿದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಬೆಂಬಲಿಸುವಂತೆ ತಮಿಳು ಸಮುದಾಯಗಳ ಒಕ್ಕೂಟದ ಮುಖಂಡ ಎಸ್.ಮಂಜುನಾಥ್ ಮನವಿ ಮಾಡಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ತಮಿಳು ಸಮಾಜದ ಎಲ್ಲಾ ಸಮುದಾಯಗಳಿಗೆ ವೈಯುಕ್ತಿಕವಾಗಿ ಹಾಗೂ ಸರ್ಕಾರದಿಂದ ಅನುದಾನವನ್ನು ಕೊಡಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕಾರಣೀಭೂತರಾದ ಕೆ.ಎಸ್.ಈಶ್ವರಪ್ಪನವರಿಗೆ ಇಡೀ ತಮಿಳು ಸಮುದಾಯ ಒಟ್ಟಾರೆಯಾಗಿ ಬೆಂಬಲಿಸಲಿದೆ ಎಂದರು.
ಅವರು ಶನಿವಾರ ನಗರದ ವಿವಿಧ ರಸ್ತೆಗಳಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು. ಈ ಚುನಾವಣೆಯಲ್ಲಿ ಮತದಾರರು ನಮ್ಮನ್ನು ಬೆಂಬಲಿಸುವ ಮೂಲಕ ಹಿಂದುತ್ವಕ್ಕೆ ಮತ್ತಷ್ಟು ಶಕ್ತಿ ತುಂಬುವ ಜೊತೆಗೆ ಸರ್ವಾಧಿಕಾರಿಗಳ ಹಿಡಿತಕ್ಕೆ ಅಧಿಕಾರ ಸಿಗದಂತೆ ಎಚ್ಚರವಹಿಸಬೇಕೆಂದು ಮನವಿ ಮಾಡಿದರು.ನಗರಸಭೆ ವ್ಯಾಪ್ತಿಯ ಬಿ.ಎಚ್ ರಸ್ತೆ ಕಡದಕಟ್ಟೆಯಿಂದ ಆರಂಭಗೊಂಡ ರೋಡ್ ಶೋ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಸಾಗಿತು.
ಪ್ರಮುಖರಾದ ಎಂ. ಪ್ರಭಾಕರ್, ಬಿ.ಎಸ್ ನಾರಾಯಣಪ್ಪ, ಪ್ರಜಾಪ್ರತಿನಿಧಿ ಸುರೇಶ್, ಬಿ.ವಿ.ಚಂದನ್ ರಾವ್, ವಿಜಯ್, ರಾಮನಾಥ್ ಬರ್ಗೆ, ಈಶ್ವರಪ್ಪ ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳು ಪಾಲ್ಗೊಂಡಿದ್ದರು.