ರಾಷ್ಟ್ರದ ಅಭಿವೃದ್ದಿಗಾಗಿ ಯುವ ಪೀಳಿಗೆ ಕಾರ್ಯೋನ್ಮುಖರಾಗಬೇಕು: ರೇಣುಕಯ್ಯ

KannadaprabhaNewsNetwork |  
Published : Jan 27, 2024, 01:17 AM IST
ರಾಷ್ಟ್ರದ ಅಭಿವೃದ್ದಿಗಾಗಿ ಯುವ ಪೀಳಿಗೆ ಕಾರ್ಯೋನ್ಮುಖರಾಗಬೇಕು : ರೇಣುಕಯ್ಯ | Kannada Prabha

ಸಾರಾಂಶ

ಯುವ ಜನಾಂಗ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಪ್ರಗತಿ ಹೊಂದುವ ಮೂಲಕ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ನಗರದ ಎಸ್.ವಿ.ಪಿ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ರಾಷ್ಟ್ರದ ಐಕ್ಯತೆ ಮತ್ತು ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಯುವ ಪೀಳಿಗೆಯ ಕೊಡುಗೆ ಮಹತ್ತರವಾಗಿದ್ದು, ಈ ನಿಟ್ಟಿನಲ್ಲಿ ಯುವ ಜನಾಂಗ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಪ್ರಗತಿ ಹೊಂದುವ ಮೂಲಕ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದು ನಗರದ ಎಸ್.ವಿ.ಪಿ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ತಿಳಿಸಿದರು.

ನಗರದ ಎಸ್‌ವಿಪಿ ಪದವಿ ಪೂರ್ವ ಕಾಲೇಜು ಹಾಗೂ ಸುಮತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದ ಅವರು, ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ದೇಶಾಭಿಮಾನಿಗಳ ಅವಿರತವಾದ ಹೋರಾಟದ ಪರಿಶ್ರಮದ ಫಲ ಹಾಗೂ ತ್ಯಾಗ, ಬಲಿದಾನದ ಪ್ರತೀಕವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ಬ್ರಿಟಿಷರಿಂದ ಕೇವಲ ದೇಶಕ್ಕೆ ಮಾತ್ರ ಸ್ವಾತಂತ್ರ್ಯವನ್ನು ಮಾತ್ರ ಪಡೆದುಕೊಳ್ಳದೇ ರಾಜಕೀಯ ಮತ್ತು ಆರ್ಥಿಕವಾದ ಸ್ವಾತಂತ್ರ್ಯವನ್ನು ಪಡೆದುಕೊಂಡೆವು. ಅಂಬೇಡ್ಕರ್‌ ಅವರ ಆಶಯದಂತೆ ಈ ದೇಶದ ಎಲ್ಲಾ ರೀತಿಯ ವ್ಯವಸ್ಥೆಗಳಿಗೆ ಹೊಂದಿಕೊಳ್ಳುವಂತಹ ಪ್ರಜಾಸತ್ತಾತ್ಮಕವಾದ ಸಂವಿಧಾನವನ್ನು ಜಾರಿಗೆ ತಂದು ಅದರಂತೆ ಇಂದಿಗೂ ಆಡಳಿವನ್ನು ನಡೆಸಲಾಗುತ್ತಿದೆ. ಇಂದಿನ ಯುವ ಜನತೆ ಸ್ವಾತಂತ್ರ್ಯ, ಸಂವಿಧಾನ ಮತ್ತು ದೇಶದ ಬಗ್ಗೆ ಪೂರ್ಣ ಜ್ಞಾನವನ್ನು ಪಡೆದುಕೊಂಡು ಅಭಿವೃದ್ಧಿ ಪಥದಲ್ಲಿ ಸಾಗಬೇಕಿದೆ ಎಂದರು.

ಸಂಸ್ಥೆಯ ಅಧ್ಯಕ್ಷ ಕೆ.ಆರ್‌. ಬಸವರಾಜು ಮಾತನಾಡಿ, ನಮ್ಮ ಭಾರತ ಸನಾತನ ಸಂಸ್ಕೃತಿಯ ಭವ್ಯ ಪರಂಪರೆಗಳನ್ನು ಹೊಂದಿದ್ದ ಎಲ್ಲ ವಿಧದ ಸಂಪತ್ತುಗಳಿಂದ ಸಮೃದ್ಧವಾಗಿದೆ. ಯುವಕರು ಮತ್ತು ವಿದ್ಯಾರ್ಥಿಗಳು ದೇಶದ ಭವ್ಯ ಇತಿಹಾಸದ ಜೊತೆಗೆ ದೇಶಾಭಿಮಾನವನ್ನು ಬೆಳೆಸಿಕೊಂಡು ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ ಅವರ ಆದರ್ಶಗಳನ್ನು ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಕಾರ್ಯಕ್ರಮದಲ್ಲಿ ಸಂಸ್ಥೆ ಕಾರ್ಯದರ್ಶಿ ಎಸ್.ಬಿ. ಜಗದೀಶ್, ಮುಖ್ಯ ಶಿಕ್ಷಕಿ ವಿಜಯಕುಮಾರಿ, ಶಿಕ್ಷಕರಾದ ವಿಜಯಕುಮಾರ, ಉದಯ್‌ಶಂಕರ್, ಸಿದ್ದೇಶ್, ಸಂತೋಷ್, ನಾಗರಾಜು, ಚನ್ನೇಗೌಡ, ರಘುನಾಥ್, ಎಸ್.ಕೆ. ಪ್ರದೀಪ್, ಬಿ. ವೆಂಕಟೇಶ್ ಮತ್ತಿತರರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ