ಸಿಎ ಮಾಡುತ್ತಿದ್ದ ಯುವಕ ನೇಣಿಗೆ

KannadaprabhaNewsNetwork |  
Published : Aug 19, 2026, 01:30 AM IST
ವೇತನ ಮತ್ತು ಪಿ.ಎಫ್ ಹಾಗು ಇಎಸ್‌ಐ ವಂತಿಕೆ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ನಂ.೪ರ ಭದ್ರಾವತಿ ತಾಲೂಕಿನ ಬಿಆರ್‌ಎಲ್‌ಬಿಸಿ ವಿಭಾಗದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಕಾರ್ಯಪಾಲಕ ಇಂಜಿನಿಯರ್‌ರವರ ಕಛೇರಿ ಮುಂಭಾಗ ಮಂಗಳವಾರ ಇಲಾಖೆಯ ಹೊರಗುತ್ತಿಗೆ ಸೌಡಿ ನೌಕರರು ಮುಷ್ಕರ ನಡೆಸಿದರು. | Kannada Prabha

ಸಾರಾಂಶ

Young man doing CA hanged

ಶಿವಮೊಗ್ಗ: ಸಿಎ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೊಮ್ಮನಕಟ್ಟೆ ಕಲ್ಪವೃಕ್ಷ ಲೇ ಔಟ್‌ನ ಬಾಡಿಗೆ ಮನೆಯಲ್ಲಿ ನಡೆದಿದೆ.

ಶ್ರೀನಿಧಿ(24) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತ ಶ್ರೀನಿಧಿ ಒಂದು ವರ್ಷದಿಂದ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಬಳಿ ಸಿಎ ವ್ಯಾಸಂಗ ಹಾಗೂ ತರಬೇತಿ ಪಡೆಯುತ್ತಿದ್ದ ಎನ್ನಲಾಗಿದೆ. ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ಶ್ರೀನಿಧಿ ಬಳಿಕ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಬೊಮ್ಮನಕಟ್ಟೆಯ ಕಲ್ಪವೃಕ್ಷ ಲೇಔಟ್‌ನಲ್ಲಿರುವ ಮನೆಯೊಂದರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಶ್ರೀನಿಧಿ, ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಟ್ಟನಹಳ್ಳಿ ಬಡಾವಣೆಗೆ ಸಮರ್ಪಕ ನೀರಿನ ವ್ಯವಸ್ಥೆ ಇಲ್ಲ
ಗುಟ್ಕಾ ನಿಷೇಧ: ಸಚಿವ ಯು.ಟಿ ಖಾದರ್ ಕ್ರಮ ಸ್ವಾಗತಾರ್ಹ