ಏಷಿಯನ್ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿಪದಕ ಪಡೆದ ಹಳಿಯಾಳದ ಯುವಕ

KannadaprabhaNewsNetwork |  
Published : Jul 12, 2026, 03:30 AM IST
ಏಷಿಯನ್ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ವಿಜೇತ ಶಿವಾಜಿ ಪರಶುರಾಮ ಮಾದಪ್ಪಗೌಡ. | Kannada Prabha

ಸಾರಾಂಶ

ಚೀನಾದಲ್ಲಿ ನಡೆದಿರುವ 23 ವರ್ಷದೊಳಗಿನ ಏಷಿಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 5000 ಮೀಟರ್ ವಿಭಾಗದ ಓಟದ ಸ್ಪರ್ಧೆಯಲ್ಲಿ ತಾಲೂಕಿನ ಬೆಳವಟಗಿ ಗ್ರಾಮದ ಶಿವಾಜಿ ಪರಶುರಾಮ ಮಾದಪ್ಪಗೌಡ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.

ಹಳಿಯಾಳ: ಚೀನಾದಲ್ಲಿ ನಡೆದಿರುವ 23 ವರ್ಷದೊಳಗಿನ ಏಷಿಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 5000 ಮೀಟರ್ ವಿಭಾಗದ ಓಟದ ಸ್ಪರ್ಧೆಯಲ್ಲಿ ತಾಲೂಕಿನ ಬೆಳವಟಗಿ ಗ್ರಾಮದ ಶಿವಾಜಿ ಪರಶುರಾಮ ಮಾದಪ್ಪಗೌಡ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.

ಶಿವಾಜಿ ಮಾದಪ್ಪಗೌಡ ಅವರು 14 ನಿಮಿಷ 08.19 ಸೆಕೆಂಡುಗಳಲ್ಲಿ ಗುರಿ ತಲುಪಿ ದ್ವಿತೀಯ ಸ್ಥಾನ ಪಡೆದರೆ, ಭಾರತದ ಇನ್ನೋರ್ವ ಅಥ್ಲೀಟ್ ವಿನೋದ್ ಸಿಂಗ್‌ ಅವರು 14 ನಿಮಿಷ 23.67 ಸೆಕೆಂಡುಗಳಲ್ಲಿ ಓಟ ಮುಗಿಸಿ ಕಂಚಿನ ಪದಕ ಪಡೆದರು. ಈ ಮೂಲಕ ಪುರುಷರ 5000 ಮೀಟರ್ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಭಾರತ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದು ಉತ್ತಮ ಸಾಧನೆ ಮಾಡಿದಂತಾಗಿದೆ.

ತಾಲೂಕಿನ ಬೆಳವಟಗಿ ಗ್ರಾಮದ ಶಿವಾಜಿ ಮಾದಪ್ಪಗೌಡ ಅವರ ಸಾಧನೆಗೆ ತಾಲೂಕಿನ ಕ್ರೀಡಾಭಿಮಾನಿಗಳು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಹರ್ಷ ವ್ಯಕ್ತಪಡಿಸಿವೆ.

ರಾಷ್ಟ್ರೀಯ ಕುಸ್ತಿ ಪಂದ್ಯಾವಳಿ: ಹಳಿಯಾಳದ ಕ್ರೀಡಾ ವಸತಿ ನಿಲಯಕ್ಕೆ ಎರಡು ಪದಕ

ಹರಿಯಾಣದ ರೋಹಟಕ್‌ನಲ್ಲಿ ಆರಂಭಗೊಂಡಿರುವ 23 ವರ್ಷ ವಯೋಮಿತಿಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕ್ರೀಡಾ ವಸತಿ ನಿಲಯಕ್ಕೆ ಎರಡು ಪ್ರಶಸ್ತಿಗಳು ಬಂದಿವೆ.

ಕ್ರೀಡಾ ವಸತಿ ನಿಲಯದ ಕುಸ್ತಿಪಟು ಶಾಲಿನಾ ಸಿದ್ದಿ ಅವರು 55 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರೆ, ಇನ್ನೋರ್ವ ಕುಸ್ತಿಪಟು ಪ್ರಿನ್ಸಿಟಾ ಸಿದ್ದಿ 62 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.ರೋಹಟಕ್‌ನಲ್ಲಿ ಜು. 10ರಂದು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಆರಂಭಗೊಂಡಿದ್ದು, ಮೂರು ದಿನ ನಡೆಯಲಿದೆ. ಕುಸ್ತಿಪಟುಗಳಿಗೆ ಜಿ. ಅನುಶ್ರೀ ತರಬೇತಿ ನೀಡಿದ್ದಾರೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ವದಂತಿಗೆ ಕಿವಿಗೊಡದಿರಿ: ಧರ್ಮಜ ಉತ್ತಪ್ಪ
ಅಡಕೆ ಸಾಗಾಟ ಕಂಟೈನರ್‌ಗೆ ‘ಮಹಾ’ ತಡೆ ನಿವಾರಣೆ: ಡೀವಿ