ಹೊಸಕೋಟೆ: ಮನೆಯ ಮುಂದೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಳಿಗ್ಗೆ ಸುಮಾರು ೫ ಗಂಟೆಯಲ್ಲಿ ಮನೆಯವರು ಶಿವಶಂಕರ್ ಮನೆಯಲ್ಲಿ ಇಲ್ಲದ್ದನ್ನು ಕಂಡು ಹೊರಗಡೆ ಬಂದು ನೋಡಿದಾಗ ಶಿವಶಂಕರ್ ಕೊಲೆಯಾದ ಸ್ಥಿತಿಯಲ್ಲಿದ್ದ ಬಿದ್ದಿದ್ದ. ದುಷ್ಕರ್ಮಿಗಳು ಕಬ್ಬಿಣದ ಲಾಂಗ್‌ನಿಂದ ಕುತ್ತಿಗೆ ಭಾಗವನ್ನು ಕತ್ತರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್, ಡಿವೈಎಸ್ಪಿ ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಓರ್ವನ ಬಂಧನ: ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಡಿವೈಎಸ್ಪಿ ಮಲ್ಲೇಶ್ ನೇತೃತ್ವದ ತಂಡ ಹೊಸಕೋಟೆ ತಾಲೂಕಿನ ನಕ್ಕನಹಳ್ಳಿ ಗ್ರಾಮದ ನವೀನ್ ಕುಮಾರ್(30) ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ನವೀನ್ ಕುಮಾರ್ ಹಾಗೂ ಕೊಲೆಯಾದ ಶಿವಶಂಕರ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಫೋಟೋ: 14 ಹೆಚ್‌ಎಸ್‌ಕೆ 2 ಮತ್ತು 3
3: ಹೊಸಕೋಟೆ ತಾಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಕೊಲೆಯಾದ ಶಿವಶಂಕರ್ ಮನೆ ಬಳಿ ಪೊಲೀಸರು ಪರಿಶೀಲನೆ ನಡೆಸಿದರು.