ಕನ್ನಡಪ್ರ ವಾರ್ತೆ ಬೈಲಹೊಂಗಲ
ಮೊಹಮ್ಮದ ಸೋಹಿಲ್ ನಿಯಾಜ್ ಅಹ್ಮದ್ ಕಿತ್ತೂರ (17) ಹತ್ಯೆಯಾದ ಯುವಕ. ಯುವಕ ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ. ಆರೋಪಿಯನ್ನು ಆದಿತ್ಯಾ ಮಹಾಂತೇಶ ಬಾಳಿಕಾಯಿ (20) ಹತ್ಯೆ ಮಾಡಿ ಪರಾರಿಯಾಗಿದ್ದು, ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಈ ಹಿಂದೆಯೂ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂಬುದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡ ಠಾಣೆಯ ಸಿಪಿಐ ಐ.ಎಂ. ಮಠಪತಿ ಹಾಗೂ, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಹತ್ಯೆ ಖಂಡಿಸಿ ಮುರಗೋಡ ಪೊಲೀಸ್ ಠಾಣೆ ಮುಂದೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು.