ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಐಕ್ಯೂಎಸಿ ಘಟಕ, ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆ 2023-24 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ದೇಹದಾರ್ಢ್ಯ ಸ್ಪರ್ಧೆ ದೃಷ್ಟಿಯಿಂದ ಗಮನಿಸಿದಾಗ ಯುವಜನರು ದೇಹಕ್ಕೆ ಹಾನಿ ಉಂಟು ಮಾಡಬಲ್ಲ ಪೌಡರ್‌ಗಳ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ವಸ್ತುಗಳ ಬಳಕೆ ಕಡಿಮೆ ಸಮಯದಲ್ಲಿ ಫಲಿತಾಂಶ ನೀಡಿದಂತೆ ಕಂಡರೂ, ಜೀವನಪೂರ್ತಿ ನೋವು ನೀಡುವ ಕಾಯಿಲೆಗಳನ್ನು ನಿಮ್ಮ ದೇಹಕ್ಕೆ ಆವರಿಸುವಂತೆ ಮಾಡುತ್ತವೆ. ಆದ್ದರಿಂದ ಯಾವುದೇ ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ ಎಂದು ತಿಳಿಸಿದರು.ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಶಿಸ್ತಿನ ಜೀವನಶೈಲಿ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಯುವಜನರು ಕ್ರೀಡಾ ಚಟುವಟಿಕೆ ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ವಹಿಸಬೇಕು. ನಮ್ಮ ಸಂಸ್ಥೆ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಪ್ರತಿಯೊಬ್ಬ ಕ್ರೀಡಾಪಟುವಿಗೂ ಅಭಿನಂದನೆ ಎಂದು ಹೇಳಿದರು.
ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಯುವಜನತೆ ಸಮಾಜದ ಆಸ್ತಿ, ದೇಹ ಸದೃಢ ಆಗಿಟ್ಟುಕೊಂಡರೆ ಮನಸ್ಸು ಸಹ ಸದೃಢವಾಗಿರುತ್ತದೆ. ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವ ಕೇಂದ್ರಗಳು ಹೆಚ್ಚಾಗಬೇಕು. ಯುವ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮುಖ್ಯ ಎಂದು ಅಭಿಪ್ರಾಯಪಟ್ಟರು.
- - - -9ಎಸ್‌ಎಂಜಿಕೆಪಿ03: