ಚೇಂಬರ್ ಆಫ್ ಕಾಮರ್ಸ್, ಬೆಂಗಳೂರಿನ ಕಾಸಿಯಾ ಸಂಸ್ಥೆ ಏರ್ಪಡಿಸಿದ್ದ ರಫ್ತು ಕುರಿತ ವಿಚಾರ ಸಂಕಿರಣ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವಜನತೆ ಮುಂದಾಗಬೇಕು ಎಂದು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಆರ್. ಎಂ. ಮಹೇಶ್ ಕರೆ ನೀಡಿದರು.ನಗರದ ಗ್ರಾಂಡ್ ಕೃಷ್ಣ ಹೋಟೆಲ್ ಸಭಾಂಗಣದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಚೇಂಬರ್ ಆಫ್ ಕಾಮರ್ಸ್ ಹಾಗೂ ಬೆಂಗಳೂರಿನ ಕಾಸಿಯಾ ಸಂಸ್ಥೆ ಏರ್ಪಡಿಸಿದ್ದ ರಫ್ತು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿವೆ, ಅದರಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು. ಯಾವುದೇ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಕೈಗಾರಿಕೆಗಳ ಸ್ಥಾಪನೆ ಆಗಬೇಕು. ಅದರಿಂದ ಜಿಲ್ಲೆಯ ಸಹಸ್ರಾರು ಜನರಿಗೆ ಉದ್ಯೋಗ ದೊರೆಯುತ್ತದೆ. ಆ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದರು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಮತ್ತು ರಫ್ತು ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚಿನ ವರ್ಷಗಳಲ್ಲಿ ಹಲವು ಸವಲತ್ತು ನೀಡುತ್ತಿದ್ದು ಯುವ ಜನತೆ ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯಮಿಗಳಾಗಬೇಕು ಎಂದು ಕಿವಿಮಾತು ಹೇಳಿದರು. ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಷನ್ ಕಾರ್ಪೊರೇಷನ್ನಿನ ಉಪ ನಿರ್ದೇಶಕ ಮನ್ಸೂರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಗಳನ್ನು ಸ್ಥಾಪಿಸುವ ಬಗೆ ಮತ್ತು ರಫ್ತಿನ ಕುರಿತು ಉಪನ್ಯಾಸ ನೀಡಿದರು. ಕಾಸಿಯ ಸಂಸ್ಥೆ ಅಧ್ಯಕ್ಷ ಸಿ.ಎ. ಶಶಿಧರ ಶೆಟ್ಟಿ ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವಜನತೆ ಮುಂದೆ ಬಂದಲ್ಲಿ ತಮ್ಮ ಸಂಸ್ಥೆಯಿಂದ ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂಬ ಭರವಸೆ ನೀಡಿದರು. ಕಾಸಿಯ ಸಂಸ್ಥೆ ಉಪಾಧ್ಯಕ್ಷ ಎಂ.ಜಿ. ರಾಜಗೋಪಾಲ್ ಅರುಣ್ ಪಡಿಯಾರ್, ಚೆಂಬರ್ ಆಫ್ ಕಾಮರ್ಸ್ ನ ಉಪಾಧ್ಯಕ್ಷ ಶಾಂತಾರಾಮ್ ಹೆಗಡೆ, ನಿರ್ದೇಶಕರಾದ ಅಕ್ಕಿ ಕಾಳು ವೆಂಕಟೇಶ್, ಆನಂದ್‌ಕುಮಾರ್ ಶೆಟ್ಟಿ, ಮೋಹನ್‌ಕುಮಾರ್, ಶಿವಣ್ಣ, ಕುಮಾರಸ್ವಾಮಿ, ಕಾರ್ತಿಕ್ ಉಪಸ್ಥಿತರಿದ್ದರು.
ಪೋಟೋ ಫೈಲ್ ನೇಮ್ 24 ಕೆಸಿಕೆಎಂ 1ಚಿಕ್ಕಮಗಳೂರಿನ ಗ್ರಾಂಡ್ ಕೃಷ್ಣ ಹೋಟೆಲ್ ಸಭಾಂಗಣದಲ್ಲಿ ನಡೆದ ರಫ್ತು ಕುರಿತ ವಿಚಾರ ಸಂಕಿರಣವನ್ನು ಮಹೇಶ್ ಅವರು ಉದ್ಘಾಟಿಸಿದರು.