ಕನ್ನಡಪ್ರಭ ವಾರ್ತೆ ಉಡುಪಿ
ಅವರು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಕೃತಕ ಅವಯವ ಜೋಡಣಾ ಘಟಕದ ಜೊತೆಗೆ ಮಾಡುತ್ತಿರುವ, ಮಾನವೀಯ ಕಾರ್ಯ, ಸಾಮಾಜಿಕ ಸೇವೆಯ ಬಗ್ಗೆ ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಆದರ್ಶ್ ಆಸ್ಪತ್ರೆಯ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಮಾತನಾಡಿ, ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದೆ. ಯುವಜನತೆ ಜೀವನದಲ್ಲಿ ವಿದ್ಯಾಭ್ಯಾಸದೊಂದಿಗೆ ರಕ್ತ ದಾನದಂತಹ ಮಾನವೀಯ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಯುವಜನತೆಯು ರಕ್ತದಾನ ಮಹತ್ವವನ್ನು ಅರಿತು ಹೆಚ್ಚು ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು.ಈ ಸಂದರ್ಭದಲ್ಲಿ ರಕ್ತ ದಾನಿಗಳಾದ ಬನ್ನಾಡಿ ರಾಘವೇಂದ್ರ ಶೆಟ್ಟಿ, ಸುದರ್ಶನ್ ಕೆ. ಕುಂದಾಪುರ, ಕೆ. ದೀಪಕ್ ಕಾಮತ್, ಹರೀಶ್ ಅಮೀನ್ ಹಾಗೂ ಚೇತನ್ ಕುಮಾರ್ ಅವರನ್ನು ಗೌರವಿಸಲಾಯಿತು.
ಉಡುಪಿ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿದರು. ರೆಡ್‌ಕ್ರಾಸ್ ಖಜಾಂಜಿ ರಮಾದೇವಿ ವಂದಿಸಿದರು.