ಯುವ ಜನತೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಿ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Apr 30, 2025, 12:39 AM IST
29ಯಶ್ ಪಾಲ್ | Kannada Prabha

ಸಾರಾಂಶ

ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ದೇಶದ ಯುವ ಶಕ್ತಿ ಶೈಕ್ಷಣಿಕವಾಗಿ ಸದೃಢವಾಗುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಂಡರೆ ಮಾತ್ರ ಭವಿಷ್ಯದಲ್ಲಿ ಒಳ್ಳೆಯ ಪ್ರಜೆಯಾಗಿ ಹೆತ್ತವರಿಗೆ ಗೌರವ ಮತ್ತು ಕೀರ್ತಿಯನ್ನು ತಂದುಕೊಡಲು ಸಾಧ್ಯ ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಅಭಿಪ್ರಾಯಪಟ್ಟರು.

ಅವರು ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿ ಕಾರ್ಕಳದ ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಮಾತನಾಡಿ, ಕೇವಲ ಕ್ಷಣಿಕ ಸಂತೋಷ ನೀಡುವ ವಿಷಯಗಳಿಗೆ ಮಾರುಹೋಗದೆ, ತಂದೆ ತಾಯಿಯ ತ್ಯಾಗ ಮತ್ತು ಪರಿಶ್ರಮವನ್ನು ಅರಿತುಕೊಂಡು ಭವಿಷ್ಯದ ಬದುಕನ್ನು ಭದ್ರವಾಗಿ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಪ್ರೊ. ಕವಿತಾ ಕೆ.ಆರ್., ಶ್ಯಾಮಿಲಿ ಟ್ರಸ್ಟ್‌ನ ಶ್ಯಾಮಿಲಿ ನವೀನ್ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ., ಕಾಲೇಜು ವಾರ್ಷಿಕ ವರದಿ ಮಂಡಿಸಿದರು.ಇದೇ ಸಂದರ್ಭದಲ್ಲಿ ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ವಾಣಿಜ್ಯ ನಿಕಾಯದ ಡೀನ್ ಪ್ರೊ. ಗೌರಿ ಎಸ್. ಭಟ್, ವಿಜ್ಞಾನ ನಿಕಾಯದ ಡೀನ್ ಹಾಗೂ ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಸಾಂಸ್ಕೃತಿಕ ಸಂಚಾಲಕಿ ರೇಖಾ ಎಸ್.ಎನ್., ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಹಾಗೂ ಕಾಲೇಜಿನ ಪದವಿ ಮತ್ತು ಸ್ನಾತಕ ಪದವಿಯ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನಾ ಸ್ವಾಗತಿಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ಪ್ರಸನ್ನ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ರವಿ ಪ್ರಸಾದ್ ಕೆ.ಜಿ. ವಂದಿಸಿದರು.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ