ಯುವಜನರು ದುಶ್ಚಟಗಳಿಂದ ದೂರವಿರಬೇಕು: ಶರಣಪ್ಪ ಸಲಹೆ

KannadaprabhaNewsNetwork |  
Published : Oct 08, 2025, 01:00 AM IST
ಕ್ಯಾಪ್ಷನ7ಕೆಡಿವಿಜಿ31 ಶರಣಪ್ಪ ಸಲಾದಪುರ | Kannada Prabha

ಸಾರಾಂಶ

ಯುವ ಸಂಪನ್ಮೂಲ ದೇಶದ ಆಸ್ತಿಯಾಗಿದೆ. ಈ ರಾಷ್ಟ್ರೀಯ ಸಂಪತ್ತು ಸಂರಕ್ಷಣೆ ನಿಟ್ಟಿನಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳಿಂದ ದೂರವಿರುವಂತೆ ವ್ಯಾಪಕ ಜಾಗೃತಿ ಜೊತೆಗೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಮಂಡಳಿ ಕಾರ್ಯನಿರ್ವಹಿಸಲಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿದ್ದಾರೆ.

- ಕಾಲೇಜುಗಳಲ್ಲಿ ಮಾದಕ ವಸ್ತು ಮಾರಾಟ ಜಾಲ ಪತ್ತೆಗೆ ಕ್ರಮ- - -

ದಾವಣಗೆರೆ: ಯುವ ಸಂಪನ್ಮೂಲ ದೇಶದ ಆಸ್ತಿಯಾಗಿದೆ. ಈ ರಾಷ್ಟ್ರೀಯ ಸಂಪತ್ತು ಸಂರಕ್ಷಣೆ ನಿಟ್ಟಿನಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳಿಂದ ದೂರವಿರುವಂತೆ ವ್ಯಾಪಕ ಜಾಗೃತಿ ಜೊತೆಗೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಮಂಡಳಿ ಕಾರ್ಯನಿರ್ವಹಿಸಲಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿದರು.

ಮಂಗಳವಾರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವ್ಯಸನಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸ್ವಾಸ್ಥ್ಯಸಮಾಜ ನಿರ್ಮಾಣ ಮಾಡಬೇಕಾಗಿದೆ. ಕಳ್ಳ ಸಾಗಣೆ ಮೂಲಕ ಮಾದಕ ವಸ್ತುಗಳ ಮಾರಾಟ ಜಾಲ ಬೇರು ಸಮೇತ ಕಿತ್ತೆಸೆಯಬೇಕು. ಎಲ್ಲ ಕಾಲೇಜುಗಳ ಹಂತದಲ್ಲಿಯೇ ಮಾಹಿತಿ ಸಂಗ್ರಹಿಸಿ, ಮಾದಕ ವಸ್ತು ಮಾರಾಟ ಜಾಲವನ್ನು ಪತ್ತೆಹಚ್ಚುವ, ಕಠಿಣ ಕಾನೂನು ಕ್ರಮ ಕೈಗೊಳ್ಳುವ ಕ್ರಮ ವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಜಿಲ್ಲಾಡಳಿತ ಸಹಕಾರದೊಂದಿಗೆ ಸಂಬಂಧಿಸಿದ ಇಲಾಖೆ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಬುದ್ಧ, ಬಸವಣ್ಣ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ. ಇಲ್ಲದೇ ಹೋಗಿದ್ದಿದ್ದರೆ ಇಂದು ನಾವು ಹೇಗೆ ಇರುತ್ತಿದ್ದೆವು ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಮದ್ಯ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪಪರಿಣಾಮಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದರೆ ಸಾಲದು. ಅವುಗಳ ಬಗ್ಗೆ ಹೆಚ್ಚು ವಿಚಾರ ವಿನಿಮಯದಂತಹ ಜಾಗೃತಿ ಕಾರ್ಯಕ್ರಮ ಏರ್ಪಡಿಸಿ, ಯುವ ಸಮುದಾಯಕ್ಕೆ ಮಾಹಿತಿ ತಲುಪಿಸುವ ಕೆಲಸ ಮಾಡಲಾಗುತ್ತದೆ. ವ್ಯಸನಮುಕ್ತ ಸಮಾಜ ಕಟ್ಟುವಲ್ಲಿ ಎಲ್ಲರ ಸಹಕಾರದಿಂದ ಮದ್ಯಪಾನ ಸಂಯಮ ಮಂಡಳಿಯಿಂದ ಪರಿಣಾಮಕಾರಿ ಕೆಲಸ ಮಾಡಲು ಗುರಿ ಹೊಂದಲಾಗಿದೆ ಎಂದರು.

- - -

-7ಕೆಡಿವಿಜಿ31: ಶರಣಪ್ಪ ಸಲಾದಪುರ

PREV

Recommended Stories

ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ
ವಾಯವ್ಯ ಸಾರಿಗೆಗೆ ಶೀಘ್ರ 700 ಹೊಸ ಬಸ್‌ : ಕಾಗೆ