ಯುವಜನತೆ ಮಾದಕ ದ್ರವ್ಯ ಸೇವನೆಯಿಂದ ದೂರವಿರಿ

KannadaprabhaNewsNetwork |  
Published : Jun 30, 2025, 12:34 AM IST

ಸಾರಾಂಶ

ದಾಬಸ್‍ಪೇಟೆ : ಯವ್ವನದಲ್ಲಿ ಮಾದಕ ದ್ರವ್ಯ ಸೇವನೆ ಆಕರ್ಷಣೆಯಾಗಿದ್ದರೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇಂತಹ ಮಾದಕ ದ್ರವ್ಯ ಸೇವನೆಯಿಂದ ದೂರವಿರುವಂತೆ ಪೊಲೀಸ್ ಇನ್ಸ್ ಪೆಕ್ಟರ್ ರಾಜು ಕಿವಿಮಾತು ಹೇಳಿದರು.

ದಾಬಸ್‍ಪೇಟೆ : ಯವ್ವನದಲ್ಲಿ ಮಾದಕ ದ್ರವ್ಯ ಸೇವನೆ ಆಕರ್ಷಣೆಯಾಗಿದ್ದರೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇಂತಹ ಮಾದಕ ದ್ರವ್ಯ ಸೇವನೆಯಿಂದ ದೂರವಿರುವಂತೆ ಪೊಲೀಸ್ ಇನ್ಸ್ ಪೆಕ್ಟರ್ ರಾಜು ಕಿವಿಮಾತು ಹೇಳಿದರು.

ಪಟ್ಟಣದ ವಿದ್ಯಾಸ್ಪೂರ್ತಿ ಇಂಟರ್ ನ್ಯಾಷನಲ್ ಆಕಾಡೆಮಿ ಶಾಲೆಯಲ್ಲಿ ದಾಬಸ್‍ಪೇಟೆ ಪೊಲೀಸ್ ಠಾಣಾ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯುವಜನತೆ ಮಾದಕ ವಸ್ತುಗಳಿಗೆ ಮೊರೆ ಹೋಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ದೇಶದ ಯುವಶಕ್ತಿ ಕ್ಷೀಣಿಸುವ ಆತಂಕ ಎದುರಾಗಲಿದೆ. ಕಾಲೇಜು ಮೆಟ್ಟಿಲು ಹತ್ತುವ ಯುವ ಜನತೆ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಆರಂಭದಲ್ಲಿ ಕುತೂಹಲಕ್ಕೆ ಮಾದಕ ವಸ್ತು ಸೇವಿಸುವ ಯುವಕರು ನಂತರದಲ್ಲಿ ಫ್ಯಾಷನ್ ಎಂದು ಬಳಿಕ ಚಟವಾಗಿ ಮಾರ್ಪಟ್ಟು ಅದಕ್ಕೆ ದಾಸರಾಗುತ್ತಿದ್ದಾರೆ ಎಂದು ತಿಳಿಸಿದರು.

ಶಾಲಾ ಸಂಸ್ಥಾಪಕ ಅಧ್ಯಕ್ಷ ಉಮಾಶಂಕರ್ ಮಾತನಾಡಿ, ಯುವ ಜನತೆ ದೇಶದ ಆಸ್ತಿಯಾಗಿದ್ದು, ಮಾದಕ ದ್ರವ್ಯಗಳ ವಿರುದ್ಧ ಎಚ್ಚೆತ್ತು ಜನಜಾಗೃತಿ ಮೂಡಿಸಬೇಕಿದೆ. ಇಂದಿನ ಯುವ ಜನಾಂಗ ಆರಂಭದಲ್ಲಿ ಸಂತೋಷ, ವಿನೋದಕ್ಕಾಗಿ ಮಾದಕ ದ್ರವ್ಯ ಸೇವಿಸುತ್ತಾರೆ. ಅದು ಚಟವಾಗಿ ಬದುಕನ್ನೇ ನಾಶ ಮಾಡುವ ಮಟ್ಟಕ್ಕೆ ಬೆಳೆದು ನಿಲ್ಲುತ್ತದೆ. ಹಾಗಾಗಿ ಯುವಜನತೆ ಜಾಗೃತರಾಗಿರಬೇಕು ಎಂದರು.

ಆಡಳಿತಾಧಿಕಾರಿ ರಾಮಚಂದ್ರ ಮಾತನಾಡಿ, ಉತ್ತಮ ನಾಗರಿಕರಾಗಲು ಮಕ್ಕಳು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಆರೋಗ್ಯದ ಮೇಲೆ ಪರಿಣಾಮ ಬೀರುವಂತ ವಸ್ತುಗಳ ವ್ಯಸನಿಗಳಾಗಬಾರದು. ಇದರಿಂದ ವೈಯಕ್ತಿಕವಾಗಿ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರು ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ರಾಮಚಂದ್ರ, ಶಾಲಾ ವ್ಯವಸ್ಥಾಪಕ ಸೋಮಶೇಖರ್, ಪ್ರಾಂಶುಪಾಲ ದಿಲೀಪ್ ಕುಮಾರ್, ಪೊಲೀಸ್ ಸಿಬ್ಬಂದಿ, ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ