ಶಿವಮೊಗ್ಗ: ಮೊಬೈಲ್ ನೋಡದಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಹಾರನಹಳ್ಳಿಯ ಧನುಶ್ರೀ (20) ಮೃತ ವಿದ್ಯಾರ್ಥಿನಿ. ಪ್ರಥಮ ವರ್ಷದ ಪದವಿ ಓದುತ್ತಿದ್ದಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಮೂರು ದಿನದಿಂದ ಆಕೆ ಜೀವನ್ಮರಣ ಸ್ಥಿತಿಯಲ್ಲಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.