ಜಿಂಕೆ ಬೇಟೆಯಾಡಿದ ಯುವಕನಿಗೆ ನ್ಯಾಯಾಂಗ ಬಂಧನ

KannadaprabhaNewsNetwork |  
Published : May 13, 2026, 12:45 AM IST
12ಜಿಪಿಟಿ2ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ಅರಣ್ಯಾಧಿಕಾರಿ ಶಿವಕುಮಾರ್‌ ಹಾಗು ಸಿಬ್ಬಂದಿ ಜಿಂಕೆ ಮಾಂಸದ ಸಮೇತ ಸಿಕ್ಕಿ ಬಿದ್ದ ಆರೋಪಿ ಲಕ್ಷ್ಮಣನೊಂದಿದೆ. | Kannada Prabha

ಸಾರಾಂಶ

ಆರೋಪಿ ಲಕ್ಷ್ಮಣನನ್ನು ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ಅರಣ್ಯಾಧಿಕಾರಿ ಶಿವಕುಮಾರ್‌ ಹಾಗೂ ಸಿಬ್ಬಂದಿ ವಿಚಾರಣೆ ನಡೆಸಿದಾಗ ಜಿಂಕೆಯನ್ನು ನಾನು ಬೇಟೆಯಾಡಿಲ್ಲ. ತಾಲೂಕಿನ ಭೀಮನಬೀಡು ಗ್ರಾಮದ ಮತ್ತೋರ್ವ ಯುವಕ ಜಿಂಕೆ ಬೇಟೆಯಾಡಿ ನನಗೆ ಮಾಂಸ ಕೊಟ್ಟಿದ್ದು ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.

ಗುಂಡ್ಲುಪೇಟೆ: ತಾಲೂಕಿನ ಕೂತನೂರು ಗ್ರಾಮದ ಲಕ್ಷ್ಮಣ ಎಂಬ ಯುವಕ ಜಿಂಕೆ ಬೇಟೆಯಾಡಿ ಜಿಂಕೆ ತಲೆ, ಮೂರು ಕಾಲುಗಳ ಸಮೇತ ಸಿಕ್ಕಿ ಬಿದ್ದಿರುವ ಹಿನ್ನೆಲೆ ಗುಂಡ್ಲುಪೇಟೆ ಜೆಎಂಎಫ್‌ಸಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿ ಲಕ್ಷ್ಮಣನನ್ನು ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ಅರಣ್ಯಾಧಿಕಾರಿ ಶಿವಕುಮಾರ್‌ ಹಾಗೂ ಸಿಬ್ಬಂದಿ ವಿಚಾರಣೆ ನಡೆಸಿದಾಗ ಜಿಂಕೆಯನ್ನು ನಾನು ಬೇಟೆಯಾಡಿಲ್ಲ. ತಾಲೂಕಿನ ಭೀಮನಬೀಡು ಗ್ರಾಮದ ಮತ್ತೋರ್ವ ಯುವಕ ಜಿಂಕೆ ಬೇಟೆಯಾಡಿ ನನಗೆ ಮಾಂಸ ಕೊಟ್ಟಿದ್ದು ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ಅರಣ್ಯಧಿಕಾರಿ ಶಿವಕುಮಾರ್‌ ಆರೋಪಿ ಲಕ್ಷ್ಮಣನನ್ನು ಗುಂಡ್ಲುಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂದುವರೆದ ಚಿರತೆ ಉಪಟಳ: ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ
ಸರ್ಕಾರಿ ಕಚರಿಗಳಲ್ಲಿ ಕಡತಗಳ ಪರಿಶೀಲನೆ, ಸಮಗ್ರ ತನಿಖೆ ನಡೆಯಲಿ: ಕಿರಂಗೂರು ಪಾಪು