ಕಾಂಗ್ರೆಸ್‌ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ

KannadaprabhaNewsNetwork |  
Published : Oct 21, 2025, 01:00 AM IST
52 | Kannada Prabha

ಸಾರಾಂಶ

ಆರ್.ಎಸ್.ಎಸ್. ಸಂಸ್ಥೆಯ ಕೆಲ ಮನುವಾದಿಗಳು ನಮಗೆ ಸಂವಿಧಾನ ಬೇಡ ಮನಸ್ಮೃತಿಬೇಕೆಂದು ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ

ಕನ್ನಡಪ್ರಭ ವಾರ್ತೆ ನಂಜನಗೂಡು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದುಷ್ಕರ್ಮಿಗಳು ದೂರವಾಣಿ ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಮೂಲಕ ಪ್ರತಿಭಟಿಸಿದರು. ಪಟ್ಟಣದ ವಿಶ್ವೇಶ್ವರಯ್ಯ ವೃತ್ತದ ಬಳಿ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮೈಸೂರು ಮುಖ್ಯ ರಸ್ತೆಯನ್ನು ಕೆಲ ಸಮಯ ಬಂದ್ ಮಾಡಿ, ಮಾನವ ಸರಪಳಿ ನಿರ್ಮಿಸಿ ಆರ್.ಎಸ್.ಎಸ್. ಸಂಘಟನೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್ ಮಾತನಾಡಿ, ಆರ್.ಎಸ್.ಎಸ್. ಸಂಸ್ಥೆಯ ಕೆಲ ಮನುವಾದಿಗಳು ನಮಗೆ ಸಂವಿಧಾನ ಬೇಡ ಮನಸ್ಮೃತಿಬೇಕೆಂದು ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ, ಅಲ್ಲದೆ ಸೃಷ್ಟಿಸಿರುವುದಲ್ಲದೆ ಪ್ರಿಯಾಂಕ ಖರ್ಗೆ ರವರಿಗೆ ಬೆದರಿಕೆ ಕರೆಯ ಮೂಲಕ ದೇಶದಲ್ಲಿ ಕೋಮುವಾದ ಸೃಷ್ಟಿಸಿ ಭಯದ ವಾತಾವರಣ ನಿರ್ಮಿಸಿರುವ ಕ್ರಮ ಖಂಡನೀಯ ಎಂದರು.ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಶಿವಣ್ಣ ಮಾತನಾಡಿ, ಕೂಡಲೇ ರಾಜ್ಯ ಹಾಗೂ ದೇಶದಲ್ಲಿ ಆರ್ಎಸ್ಎಸ್ ನಿಷೇಧಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಮಾತನಾಡಿದರು. ನಂಜನಗೂಡು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ನೇತೃತ್ವದಲ್ಲಿ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿಯವರು ನಡೆಸುತ್ತಿರುವ ಜನಜಾಗೃತಿ ಹೋರಾಟಕ್ಕೆ ಬೆಂಬಲ ಸೂಚಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಸಂಗ್ರಹಿಸಲಾಯಿತು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಕೆ. ಮಾರುತಿ, ಯೂತ್ ಕಾಂಗ್ರೆಸ್ ತಾಲೂಕು ಘಟಕದ ಅಧ್ಯಕ್ಷ ವಿಜಯ್ ಕುಮಾರ್, ರಾಜ್ಯ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿ ನಾಯಕ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಿರಂಜನ್, ಸೋಮು, ಮುಖಂಡರಾದ ಗೋವಿಂದರಾಜು, ಎನ್.ಎಸ್. ಮಾದಪ್ಪ, ಮುದ್ದುಮಾದಶೆಟ್ಟಿ, ಶಿವಪ್ಪ ದೇವರು, ಬೀರೇಗೌಡ, ರಘು, ಅಜ್ಗರ್, ಮಹೇಶ್, ಜಗದೀಶ್, ಶಿವಪ್ಪ ದೇವರು, ಮಹದೇವು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿ ಅಧಿವೇಶನಕ್ಕೆ ಪೊಲೀಸರ ಸರ್ಪಗಾವಲು
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ