ಕನ್ನಡಪ್ರಭ ವಾರ್ತೆ ಬೆಂಗಳೂರು:
ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಭವನಕ್ಕೆ ನುಗ್ಗಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಈ ಸಂದರ್ಭದಲ್ಲಿ ಬ್ಯಾರಿಕೇಡ್ ಹತ್ತಿ ನುಗ್ಗಲು ಯತ್ನಿಸಿದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣಗೊಂಡಿತು.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕುತ್ತಿದ್ದ ಕಾರ್ಯಕರ್ತರು ಏಕಾಏಕಿ ಬ್ಯಾರಿಕೇಡ್ ಹತ್ತಲು ಮುನ್ನುಗ್ಗಿದರು. ಕೂಡಲೇ ಕಾರ್ಯೋನ್ಮುಖರಾದ ಪೊಲೀಸರು ಮಂಜುನಾಥ ಗೌಡ ಸೇರಿ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.ಸರ್ಕಾರ ಗುಂಡಿಟ್ಟುಕೊಲ್ಲಬೇಕು:
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಯುವಕರ ಜೀವನದಲ್ಲಿ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಕಳೆದ ಆರು ವರ್ಷಗಳಿಂದ ನೀಟ್ ಪರೀಕ್ಷೆಯಲ್ಲಿ ಗೊಂದಲವಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ನಮ್ಮೊಂದಿಗೆ ಕೇರಳ, ತಮಿಳುನಾಡಿನವರೂ ಪತ್ರ ಬರೆದಿದ್ದಾರೆ. ಅವರಿಗೆ ನೀಟ್ ನಡೆಸಲು ಆಗುತ್ತಿಲ್ಲ. ಇನ್ನು ಹೀಗೆಯೇ ಮುಂದುವರೆದರೆ ನಮ್ಮ ರಾಜ್ಯ ನೀಟ್ನಿಂದ ಹಿಂದೆ ಸರಿಯಲಿದೆ ಎಂದರು.
ಕೋಟ್..
ಪೇ ಚರ್ಚೆ ಮಾಡಬೇಕು ಮೋದಿ ಸರ್ಕಾರ ಶಿಕ್ಷಣ ಮಾಫಿಯಾಗೆ ಎಲ್ಲವನ್ನೂ ಒಪ್ಪಿಸಿಬಿಟ್ಟಿದೆ. ಹಿಂದಿನ ಬಿಜೆಪಿ ಸರ್ಕಾರ ಪೇಪರ್ ಲೀಕ್ಗೆ ಹೆಸರುವಾಸಿಯಾಗಿತ್ತು. ನೂರಾರು ಪರೀಕ್ಷೆಗಳು ಬಿಜೆಪಿ ನಾಯಕರ ಮೂಗಿನ ಅಡಿಯಲ್ಲೇ ನಡೆದಿವೆ. ಮೋದಿ ಪರೀಕ್ಷಾ ಪೇ ಚರ್ಚಾ ಬಿಟ್ಟು ಪೇಪರ್ ಲೀಕ್ ಪೇ ಚರ್ಚೆ ಮಾಡಬೇಕು.
ಕೋಟ್..
‘ಪಿಎಂ ಈಸ್ ಕಾಂಪ್ರಮೈಸ್ಡ್’, ಐ ಆ್ಯಮ್ ಕಾಕ್ರೋಜ್ ಟೀ ಶರ್ಟ್ ಬಿಡುಗಡೆ:
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು. ಪ್ರಧಾನಿ ಮೋದಿ ಅವರು ನೀಟ್ ವಿದ್ಯಾರ್ಥಿಗಳಿಗೆ ಬೇಷರತ್ ಕ್ಷಮೆ ಕೋರಬೇಕು. ಸಿಇಟಿ ಪರೀಕ್ಷೆ ನಡೆಸಲು ರಾಜ್ಯಗಳಿಗೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಯುವ ಕಾಂಗ್ರೆಸ್ ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನಿ ಮೋದಿ ಅವರಾಗಲಿ ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು, ಈ ಜವಾಬ್ದಾರಿ ಕೇಂದ್ರ ಶಿಕ್ಷಣ ಸಚಿವ ಮತ್ತು ಪ್ರಧಾನಮಂತ್ರಿ ಹೋರಬೇಕು ಎಂದು ಒತ್ತಾಯಿಸಿದರು.5 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ: ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ಮೋದಿ ಪ್ರಧಾನಿಯಾದ ನಂತರ ಈ ಪದ್ಧತಿ ಬದಲಿಸಿ, 2016ರಲ್ಲಿ ನೀಟ್ ಪರೀಕ್ಷೆ ಜಾರಿಗೆ ತಂದರು. ಕಳೆದ ಹತ್ತು ವರ್ಷಗಳಿಂದ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಸತತ ಪರಿಶ್ರಮ ನೀಡಿದ್ದ ವಿದ್ಯಾರ್ಥಿಗಳು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಹತಾಶರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು.ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರೀಕೃತವಾಗಬಾರದು. ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು. ಇನ್ನುಮುಂದೆ ಕೇಂದ್ರಸರ್ಕಾರ ನೀಟ್ ಪರೀಕ್ಷೆಗಳನ್ನು ನಡೆಸದೆ, ಈ ಜವಾಬ್ದಾರಿಯನ್ನು ಆಯಾ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರ ಕೊಡಬೇಕು ಎಂದು ಒತ್ತಾಯಿಸಿದರು.