ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Oct 07, 2026, 02:15 AM IST
ಚುನಾವಣಾ ಆಯುಕ್ತರ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ ಅವರನ್ನು ಪೊಲೀಸರು ಬಂಧಿಸಿದರು. | Kannada Prabha

ಸಾರಾಂಶ

ಎಸ್‌ಐಆರ್‌ಗೆ ಸಂಬಂಧಿಸಿ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆ ನೀಡಬೇಕು. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ ಹುಬ್ಬಳ್ಳಿ-ಧಾರವಾಡ ನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಹುಬ್ಬಳ್ಳಿ:

ಎಸ್‌ಐಆರ್‌ಗೆ ಸಂಬಂಧಿಸಿ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆ ನೀಡಬೇಕು. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ ಹುಬ್ಬಳ್ಳಿ-ಧಾರವಾಡ ನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಯುವ ಕಾಂಗ್ರೆಸ್ ಮುಖಂಡ ಅರ್ಜುನ ಪಾಟೀಲ ನೇತೃತ್ವದಲ್ಲಿ ಕಾರವಾರ ರಸ್ತೆಯ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ, ಪ್ರಧಾನಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಎಸ್‌ಐಆರ್‌ ಹೆಸರಲ್ಲಿ ಮತ ಕಳವು ನಡೆದಿರುವ ಕುರಿತು ಆರೋಪ ವ್ಯಕ್ತಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಈ ಕೂಡಲೇ ಜ್ಞಾನೇಶಕುಮಾರ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನಾಕಾರರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಚುನಾವಣಾ ಆಯೋಗವು ಯಾವುದೇ ರಾಜಕೀಯ ಒತ್ತಡ ಅಥವಾ ಆಡಳಿತಾತ್ಮಕ ಪ್ರಭಾವಕ್ಕೆ ಒಳಗಾಗದೆ, ಸಂವಿಧಾನ ಬದ್ಧವಾಗಿ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಯುವಕರ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ನಾವು ಪ್ರಜಾಸತ್ತಾತ್ಮಕವಾಗಿ ಪ್ರಶ್ನಿಸುತ್ತೇವೆ. ಮತಕಳವು ಪ್ರಕರಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಮಹಾನಗರ ಜಿಲ್ಲಾಧ್ಯಕ್ಷ ಸದಾನಂದ ಡಂಗನವರ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಳೋಗಿ, ಅರ್ಜುನ ಪಾಟೀಲ, ಅಬ್ದುಲ್ ದೇಸಾಯಿ, ರೆಹಾನ್ ಐನಾಪುರಿ, ಪ್ರಣವ ಗಾಯಕವಾಡ, ಕಾಸಿಮ್, ಸಾಜುದ್ದೀನ ವಾಚ್‌ಮೇಕರ್, ಅಕ್ಷಯ ಪಾಟೀಲ, ಶಾನವಾಜ್‌ ಖಾನ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರೇಕೆರೂರಿನಲ್ಲಿ ಆಧಾರ್ ನೋಂದಣಿ, ತಿದ್ದುಪಡಿಗೆ ಪರದಾಟ
ಹಾವೇರಿ ತಾಲೂಕಲ್ಲಿ ಬಿರುಗಾಳಿ, ಮಳೆಗೆ ನೆಲಕಚ್ಚಿದ ಕಬ್ಬು, ಮೆಕ್ಕೆಜೋಳ