ದೇವರಹಿಪ್ಪರಗಿ : ಯುವಕನೋರ್ವ ಕಾಲುವೆಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಗಂಗನಳ್ಳಿ ಗ್ರಾಮದ ಸಮೀಪದ ಕಾಲುವೆಯಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಯುವಕನೋರ್ವ ಕಾಲುವೆಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಗಂಗನಳ್ಳಿ ಗ್ರಾಮದ ಸಮೀಪದ ಕಾಲುವೆಯಲ್ಲಿ ನಡೆದಿದೆ.
ತಾಲೂಕಿನ ಹಿಟ್ನಳ್ಳಿ ಗ್ರಾಮದ ರಾಯಪ್ಪ ಅಮೋಗಿ ಪೂಜಾರಿ(24) ಮೃತ ಯುವಕ. ಗಂಗನಳ್ಳಿ ಗ್ರಾಮದ ಸದೀಪ ಸಂಗನಗೌಡ ಬಸನಗೌಡ ಪಾಟೀಲ ಇವರ ಜಮೀನು ಹತ್ತಿರ ಕಾಲುವೆಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಗನ ಸಾವಿನಲ್ಲಿ ಸಂಶಯ ಇದೆ ಎಂದು ಮೃತನ ತಂದೆ ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.